ಗುತ್ತಿಗಾರು: ಶ್ರೀಕೃಷ್ಣ ಭಜನಾ ಮಂದಿರ ಹಾಗೂ ಯುವಕ ಮಂಡಲ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಆ.23 ರಂದು ಶ್ರೀಕೃಷ್ಣ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.
ಸಮಾರಂಭವನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಭಾನು ಉದ್ಘಾಟಿಸಲಿದ್ದಾರೆ.ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ವಹಿಸುವರು.ಅತಿಥಿಗಳಾಗಿ ಗುತ್ತಿಗಾರು ಗ್ರಾಪಂ ಪಿಡಿಒ ಶ್ಯಾಮಪ್ರಸಾದ್ , ನ್ಯಾಯವಾದಿ ವಿಶ್ವನಾಥ ದೇವಸ್ಯ ಭಾಗವಹಿಸುವರು. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ ಕಿಶೋರ್ ಕುಮಾರ್ ಪೈಕ ಸಭಾಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ, ಗುತ್ತಿಗಾರು ಸರಕಾರಿ ಕಾಲೇಜು ದ್ವಿತೀಯ ದರ್ಜೆ ಸಹಾಯಕ ಸೋಮಶೇಖರ ಮಾವಜಿ ಭಾಗವಹಿಸುವರು. ಈ ಸಂದರ್ಭ ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು , ಮೊಸರು ಕುಡಿಕೆ ಮೊದಲಾದ ಕಾರ್ಯಕ್ರಮ ನಡೆಯಲಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…