ಮಡಿಕೇರಿ : ಇತ್ತೀಚೆಗೆ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಹಾನಿಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಅವರು ಆ.30 ರಂದು ಮಧ್ಯಾಹ್ನ 1 ಗಂಟೆಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಗುಡ್ಡ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರೊಂದಿಗೆ ಚರ್ಚಿಸಲಿರುವ ಸಿದ್ದರಾಮಯ್ಯ ಅವರು ಪರಿಹಾರ ಕೇಂದ್ರಗಳ ಸ್ಥಿತಿಗತಿಯನ್ನು ಕೂಡ ಪರಿಶೀಲಿಸಲಿದ್ದಾರೆ. ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಹಾಗೂ ಪಕ್ಷದ ಪ್ರಮುಖರು ಹಾಜರಿರುವರು ಎಂದು ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel