ಇಂದಿನಿಂದ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ

September 1, 2019
12:00 PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ(ಇವಿಪಿ) ಸೆಪ್ಟಂಬರ್ 1 ರಿಂದ ಅಕ್ಟೋಬರ್ 15ರವರೆಗೆ ನಡೆಯಲಿದೆ.

Advertisement
Advertisement
Advertisement

ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ದೋಷ, ಹೆಸರಿನಲ್ಲಿ ವ್ಯತ್ಯಾಸ, ಹೆಸರು ನಾಪತ್ತೆ, ಮೃತರ ಹೆಸರು ಮತ್ತಿತರ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಮತದಾರರ ಪಟ್ಟಿಯ ದೋಷಗಳನ್ನು ಸರಿಪಡಿಸಿ ಮತದಾರರ ಭಾವಚಿತ್ರ ಹಾಗೂ ವಿವರಗಳನ್ನು ಸಮರ್ಪಕವಾಗಿ ನಮೂದಿಸುವ ಕಾರ್ಯವನ್ನು ಅಭಿಯಾನ ರೂಪದಲ್ಲಿ ನಡೆಸಿ ಶುದ್ಧ ಮತದಾರರ ಪಟ್ಟಿಯನ್ನು ತಯಾರಿಸಲು ಈ ಕಾರ್ಯಕ್ರಮವನ್ನು ಚುನಾವಣಾ ಆಯೋಗ ಏರ್ಪಡಿಸಿದೆ. ಮತದಾರರಿಗೆ ಉತ್ತಮ ಸೇವೆ ನೀಡಲು ಈ ಕಾರ್ಯಕ್ರಮ ನಡೆಯಲಿದೆ.

Advertisement

ನಾಗರಿಕರು ಈ ಅವಧಿಯಲ್ಲಿ ಸ್ವಯಂ ಮುಂದೆ ಬಂದು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ದೃಢೀಕರಿಸಿಕೊಳ್ಳಬಹುದು ತಮ್ಮ ಹೆಸರು ಮತ್ತು ಭಾವಚಿತ್ರದಲ್ಲಿ ಯಾವುದೇ ತಪ್ಪುಗಳಿದ್ದಲ್ಲಿ, ಕುಟುಂಬ ಸದಸ್ಯರ ವಿವರಗಳನ್ನು ಪರಿಶೀಲಿಸಲು, ಮತಗಟ್ಟೆಗಳ ವಿವರ ಪಡೆಯಲು, ಮತದಾರರ ಪಟ್ಟಿಯನ್ನು ಶುದ್ಧಗೊಳಿಸಲು ಸೂಕ್ತ ದಾಖಲೆಗಳನ್ನು ಒದಗಿಸಿ ಈ ಸೇವೆಯನ್ನು ಪಡೆಯಬಹುದಾಗಿದೆ.

ಮತದಾರರ ಪಟ್ಟಿ ಪರಿಶೀಲಿಸುವ ವಿಧಾನ :

Advertisement

1.ಮತದಾರರು ತಮ್ಮ ಮೊಬೈಲ್‍ನಲ್ಲಿ voter helpline ಎಂಬ ಆ್ಯಪ್‍ನ್ನು ಡೌನ್‍ಲೋಡ್ ಮಾಡಿ ವಿವರಗಳನ್ನು ಅದರಲ್ಲಿ ನಮೂದಿಸಿ ಪರಿಶೀಲಿಸಬಹುದು.

2.ನಾಡಕಚೇರಿ, ಮಂಗಳೂರು ಒನ್, ಸೇವಾ ಸಿಂಧು ಮತ್ತಿರರ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬಹುದು.

Advertisement

3.ಗ್ರಾಮ ಪಂಚಾಯತ್‍ಗಳಲ್ಲಿರುವ ಬಾಪೂಜಿ ಸೇವಾಕೇಂದ್ರ, ಅಟಲ್‍ಜಿ ಜನಸ್ನೇಹಿ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲಿಸಬಹುದು.

4. ತಾಲೂಕು ಕಚೇರಿ, ಎ.ಸಿ. ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಬಹುದು.

Advertisement

5.ಮತದಾರರ ಸಹಾಯವಾಣಿ 1950 ಸಂಖ್ಯೆಗೆ ಕರೆ ಮಾಡಬಹುದು.

6.ವೆಬ್ ಪೋರ್ಟಲ್ www.nvsp.in ಇದರಲ್ಲಿಯೂ ಪರಿಶೀಲಿಸಬಹುದು.

Advertisement

7.ತಮ್ಮ ಊರಿನ ಮತಗಟ್ಟೆ ಅಧಿಕಾರಿಗಳಲ್ಲಿ ಪರಿಶೀಲಿಸಬಹುದು.

ಮತದಾರರು ತಮ್ಮ ಹೆಸರು ಸೇರ್ಪಡೆ, ತೆಗೆದು ಹಾಕಲು, ತಿದ್ದುಪಡಿ ಮಾಡಲು, ಪರಿಶೀಲನೆ ಮತ್ತು ದೃಡೀಕರಿಸಲು ಈ ಕಾರ್ಯಕ್ರಮದಲ್ಲಿ  ಅವಕಾಶವಿದೆ. ಚುನಾವಣಾ ಆಯೋಗವು ಅನುಮೋದಿಸಿರುವ ಯಾವುದೇ ದಾಖಲೆಗಳನ್ನು (ಪಾಸ್‍ಪೋರ್ಟ್/ಡ್ರೈವಿಂಗ್ ಲೈಸನ್ಸ್/ಆಧಾರ್ ಕಾರ್ಡ್/ಬ್ಯಾಂಕ್ ಪಾಸ್ ಬುಕ್/ರೈತರ ಗುರುತಿನ ಚೀಟಿ ಮತ್ತಿತರ ದಾಖಲೆ) ತಂದು ಈ ಕೇಂದ್ರಗಳಲ್ಲಿ ಪರಿಶೀಲನೆ ಮಾಡಬಹುದು.

Advertisement

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಪಾರಂ 6, ಹೆಸರು, ಭಾವಚಿತ್ರ ಮತ್ತಿತರ ಮಾಹಿತಿ  ತಿದ್ದುಪಡಿ ಮಾಡಲು ಫಾರಂ 8 ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ಫಾರಂ 7 ಅರ್ಜಿಗಳನ್ನು ನೀಡಬೇಕು. ಈ ಮೇಲಿನ ಕೇಂದ್ರಗಳಲ್ಲಿ ಈ ಅರ್ಜಿಗಳು ಲಭ್ಯವಿದೆ.

ಮತದಾರರ ವಿವರಗಳನ್ನು  ಸರಿಪಡಿಸಿ ಶೇ 100 ರಷ್ಟು ಶುದ್ಧವಾದ ಮತದಾರರ ಪಟ್ಟಿ ತಯಾರಿಸಲು ಈ  ಪರಿಶೀಲನಾ ಕಾರ್ಯಕ್ರಮ ಸಪ್ಟೆಂಬರ್ 1 ರಿಂದ ನಡೆಯಲಿದ್ದು,  ಜಿಲ್ಲೆಯ ಮತದಾರರು ಈ ಅವಕಾಶವನ್ನು ಬಳಸಿಕೊಂಡು ಸಹಕರಿಸಲು ದಕ್ಷಿಣ ಕನ್ನಡ  ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |
November 22, 2024
2:32 PM
by: ದ ರೂರಲ್ ಮಿರರ್.ಕಾಂ
ದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ
November 20, 2024
8:06 PM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು | ಸಾರ್ವಜನಿಕರ ಜಾಗೃತಿಗಾಗಿ ಅರಿವು ಕಾರ್ಯಕ್ರಮ
November 15, 2024
10:56 PM
by: The Rural Mirror ಸುದ್ದಿಜಾಲ
ಹತ್ತಿ ಬೆಳೆಗೆ ಬೆಂಬಲ ಬೆಲೆ | 14 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ  | ಸಚಿವ ಶರಣಬಸಪ್ಪ ದರ್ಶನಾಪುರ
November 14, 2024
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror