ಬೆಂಗಳೂರು : ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಇಂದಿನಿಂದ (ಆ.13) ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ಅಡ್ಮಿಷನ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳ ಪಿಯುಸಿ ಅಡ್ಮಿಷನ್ ಇಂದಿನಿಂದ ಆರಂಭವಾಗಲಿದೆ.
ಆನ್ಲೈನ್ ಸೌಕರ್ಯ ಇರುವ ಕಾಲೇಜುಗಳಲ್ಲಿ ಆನ್ಲೈನ್ ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ. ಆನ್ಲೈನ್ ಅಡ್ಮಿಷನ್ನ ಆಯ್ಕೆ ಇಲ್ಲದಿರುವ ಕಾಲೇಜುಗಳಲ್ಲಿ ನೇರ ನೇಮಕಾತಿ ಮಾಡಿಕೊಳ್ಳಬಹುದು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಕಡ್ಡಾಯ ಎಂದು ಆದೇಶಿಸಲಾಗಿದೆ.
ಕೊರೊನಾ ಹಿನ್ನಲೆಯಲ್ಲಿ ಖಾಸಗಿ ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳಿಗೆ ಕಳೆದ ವರ್ಷಕ್ಕಿಂತ ಹೆಚ್ಚಿನ ಶುಲ್ಕ ಪಡೆಯುವಂತೆ ಸೂಚನೆ ನೀಡಿದೆ. ತರಗತಿಗಳ ಆರಂಭ ಮತ್ತು ಶೈಕ್ಷಣಿಕ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲು ನಿರ್ಧಾರ ಮಾಡಲಾಗಿದೆ.
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…