ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೂಲಮೃತ್ತಿಕಾ ಪ್ರಸಾದ ವಿತರಣೆ

November 23, 2019
9:30 AM

ಸುಬ್ರಹ್ಮಣ್ಯ:ಕುಕ್ಕೇಸುಬ್ರಹ್ಮಣ್ಯದಲ್ಲಿ ಮಹಾಪ್ರಸಾದ ಮೂಲಮೃತ್ತಿಕೆಯನ್ನು ಶನಿವಾರ ತೆಗೆಯಲಾಗುತ್ತದೆ.  ದೇವಳದ ಗರ್ಭಗುಡಿಯಿಂದ  ಪ್ರಧಾನ ಅರ್ಚಕ  ಸೀತಾರಾಮ ಎಡಪಡಿತ್ತಾಯರು  ವೈದಿಕ ವಿದಿವಿಧಾನಗಳೊಂದಿಗೆ ಮೂಲಪ್ರಸಾದ ತೆಗೆಯಲಿದ್ದಾರೆ.ಬಳಿಕ ಪ್ರಸಾದ ವಿತರಣೆ ನಡೆಯುತ್ತದೆ.  ಶ್ರೀದೇವಳದಲ್ಲಿ ಮೂಲಮೃತ್ತಿಕಾ ಪ್ರಸಾದ ತೆಗೆಯಲು ಇರುವುದರಿಂದ ಇಂದು ಮದ್ಯಾಹ್ನ 2 ಗಂಟೆಯ ನಂತರ ಭಕ್ತಾಧಿಗಳಿಗೆ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಲಾಗಿದೆ. ಶ್ರೀದೇವರ ಜಾತ್ರಾಮಹೋತ್ಸವವು  ನ.24ರಂದು ಆರಂಭಗೊಂಡು ಡಿ.9ರವರೆಗೆ ನಡೆಯಲಿದೆ.

ಮೂಲಮೃತ್ತಿಕಾ ಪ್ರಸಾದವನ್ನು ವರ್ಷದಲ್ಲಿ ಒಂದೇ ಬಾರಿ ಮಾತ್ರಾ ತೆಗೆಯಲಾಗುವುದು. ಮೂಲ ಮೃತ್ತಿಕಾ ಪ್ರಸಾದವು ವಿವಿಧ ರೋಗಗಳ ಪರಿಹಾರಕ್ಕೆ ದಿವ್ಯ ಔಷಧ ಎಂಬ ನಂಬಿಕೆ ಇದೆ.

ಇಂದು ಸಭೆ:

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವ ರಥೋತ್ಸವದ ಸಮಯದಲ್ಲಿ ಈ ಹಿಂದಿನಂತೆ ಒಂದು ಲಕ್ಷ ಹಣತೆಯನ್ನು ಉರಿಸುವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 3.00 ಗಂಟೆಗೆ ಶ್ರೀ ದೇವಳದ ಆಡಳಿತ ಕಚೇರಿಯ  ಸಭಾಂಗಣದಲ್ಲಿ ಭಕ್ತರ ಸಭೆಯನ್ನು ಕರೆಯಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror