ಸುಳ್ಯ: ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜಾ ಸಮಯದಲ್ಲಿ ಬದಲಾವಣೆಯಾಗಲಿದೆ.
ಮಂಗಳವಾರ ರಾತ್ರಿ 1.33ರಿಂದ 4.32ರವರೆಗೆ ಚಂದ್ರಗ್ರಹಣ ನಡೆಯುವ ಹಿನ್ನೆಲೆಯಲ್ಲಿ ಕೆಲವು ದೇವಾಲಯಗಳ ಪೂಜಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿ 7ಕ್ಕೆ ನಡೆಯುವ ಮಹಾಪೂಜೆ ಸಂಜೆ 6.30ಕ್ಕೆ ನಡೆಯಲಿದೆ. 7 ಗಂಟೆ ಬಳಿಕ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ. ಸಂಜೆಯ ಆಶ್ಲೇಷಾ ಬಲಿ ಸೇವೆ ಹಾಗೂ ರಾತ್ರಿಯ ಭೋಜನ ವ್ಯವಸ್ಥೆಯೂ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ. ಮಧ್ಯಾಹದವರೆಗಿನ ಪೂಜಾ ಅವಧಿ ಮತ್ತು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಚಂದ್ರಗ್ರಹಣ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ಪೂಜೆ ಮತ್ತು ದೇವರ ದರ್ಶನ ಇರುತ್ತದೆ. ಚಂದ್ರಗ್ರಹಣ ಮಧ್ಯರಾತ್ರಿ ಆಗುವುದರಿಂದ ರಾತ್ರಿ 9 ಗಂಟೆ ತನಕವೂ ಅನ್ನಛತ್ರದಲ್ಲಿ ಎಂದಿನಂತೆ ಅನ್ನ ದಾಸೋಹ ಇರಲಿದೆ.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…