ಕಾಣಿಯೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಡ್ಯಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ನಡೆಯಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಅಧಿಕಾರಿ ಉಮೇಶ ಬಿ ” ಪೂಜ್ಯ ಖಾವಂದರ ಆಶಯದಂತೆ ಪ್ರತಿಯೊಬ್ಬರು ತಿಂಗಳಿಗೊಂದರಂತೆ ಗಿಡಗಳನ್ನು ನೆಟ್ಟು ಪೋಷಿಸಬೇಕು” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಸುಮಾಧರ ಇಡ್ಯಡ್ಕ ವಹಿಸಿದ್ದರು.ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸವಣೂರು ವಲಯ ಮೇಲ್ವಿಚಾರಕರಾದ ಅಶ್ವಿನಿ ಜೆ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಇಡ್ಯಡ್ಕ, ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋದಾ ಎ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಾರ್ವಾಕ ಒಕ್ಕೂಟದ ಅಧ್ಯಕ್ಷ ಆನಂದ ಪೂಜಾರಿ ಗಾಳಿಬೆಟ್ಟು, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಚಾರ್ವಾಕ ಘಟಸಮಿತಿ ಅಧ್ಯಕ್ಷ ದಿನೇಶ್ ಐ ಕೆ, ಸೇವಾ ಪ್ರತಿನಿಧಿ ಕುಸುಮಾಧರ ಮರ್ಲಾಣಿ ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಪ್ರಾರ್ಥಿಸಿದರು.ಸಹಶಿಕ್ಷಕಿ ಚಂದ್ರಿಕಾ ಸ್ವಾಗತಿಸಿ, ಅಕ್ಷತಾ ವಂದಿಸಿದರು.ಶಾಲಾ ಮುಖ್ಯ ಗುರು ಜಯಂತ ವೈ ಕಾರ್ಯಕ್ರಮ ನಿರೂಪಿಸಿದರು.ಇದೇ ಸಂದರ್ಭದಲ್ಲಿ ಮಕ್ಕಳಿಗೆ ಗಿಡಗಳನ್ನು ವಿತರಣೆ ಮಾಡಲಾಯಿತು. ಧರ್ಣಪ್ಪ ಗೌಡ ಪತ್ತನೆಜಾಲ್, ರಮೇಶ್ ಇಡ್ಯಡ್ಕ,ಲಕ್ಷ್ಮ ಣ ಗೌಡ ಐ ಕೆ, ಪದ್ಮನಾಭ ಕೀಲೆ, ಬಾಲಕೃಷ್ಣ ಕೀಲೆ, ಗೀತಾ ಎಂ ಎ, ಅಂಗನವಾಡಿ ಕಾರ್ಯಕರ್ತೆ ವೇದಾವತಿ,ಲಕ್ಷ್ಮಣ ಕೂಡಿಗೆ ಶಾಲಾ ನಾಯಕ ಶಿವಜಿತ್ ವೈ ಜೆ ಅತಿಥಿಗಳನ್ನು ತಾಂಬೂಲ ನೀಡಿ ತಾಂಬೂಲ ನೀಡಿ ಸ್ವಾಗತಿಸಿದರು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…