ಸುಳ್ಯ: ದ.ಕ.ಜಿಲ್ಲಾ ಪಂಚಯತ್ ಕೃಷಿ ಇಲಾಖೆ ವತಿಯಿಂದ ಕೃಷಿ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಮಾಹಿತಿಯನ್ನು ಕೃಷಿಕರಿಗೆ ತಿಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಆರಂಭಗೊಂಡಿದೆ.
ಸುಳ್ಯ ಹೋಬಳಿಯ ಅಭಿಯಾನಕ್ಕೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷ ತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಪಾಲಿಚಂದ್ರ ಸ್ವಾಗತಿಸಿ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ವಂದಿಸಿದರು. ವೀರಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ ಹೋಬಳಿಯ ಕೃಷಿ ಅಭಿಯನವು 26 ರವರೆಗೆ ನಡೆಯಲಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.