ಮಂಗಳೂರು: ವೆದರ್ ರಿಪೋರ್ಟ್ ಪ್ರಕಾರ ಇನ್ನು 3 ದಿನಗಳ ಕಾಲ ರಾಜ್ಯದ ವಿವಿದೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಕಾಸರಗೋಡು, ಬದಿಯಡ್ಕ, ಮುಳ್ಳೇರಿಯ, ಉಡುಪಿ ಹಾಗೂ ದ. ಕ. ಜಿಲ್ಲೆಯಾದ್ಯಂತ ಮೋಡದ ವಾತಾವರಣ ಇರಬಹುದು. ಸಾಗರ ಹಾಗೂ ಹೊಸನಗರ ಭಾಗಗಳಲ್ಲೂ ಸಾಧಾರಣ ಮಳೆ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಉಪಗ್ರಹ ಚಿತ್ರ ಆಧರಿಸಿ ದಕ್ಷಿಣ ಕನ್ನಡ ಜಿಲ್ಲೆಯ ವೆದರ್ ಬಗ್ಗೆ ಮಾಹಿತಿ ನೀಡಿದ ಕೃಷಿಕ ಸಾಯಿಶೇಖರ್ ಹೀಗೆ ಹೇಳಿದ್ದಾರೆ..
ಇದರ ಜೊತೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇದೆ. ಇನ್ನು 2 ಅಥವಾ 3 ದಿವಸಗಳಲ್ಲಿ ಸರಿಯಾದ ಚಿತ್ರಣ ಸಿಗಬಹುದು.ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಂಡೋಮಾನ್, ನಿಕೋಬರ್ ನಲ್ಲಿ ವಾಯುಭಾರ ಕುಸಿತ ಉಂಟಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ ಧಾರಾಕಾರ ಮಳೆ ಸುರಿದಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಜಿಲ್ಲೆಗಳಲ್ಲಿ ಕೂಡಾ ಮಳೆಯಾದ ವರದಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದೆ. ಜಿಲ್ಲೆಯ ಕೆಲವೆಡೆ ನಿನ್ನೆ ಸಂಜೆ ವೇಳೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ ಸುರಿದಿದ್ದು, ಸಿಡಿಲಿಗೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490