ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ರಾಶಿಯನ್ನು ಕೂಡಲೇ ತೆರವು ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಸಭೆಗೆ ಆಗಮಿಸಿದ ಸಂದರ್ಭ ಕಳೆದ ಹಲವು ತಿಂಗಳಿನಿಂದ ನಗರ ಪಂಚಾಯತ್ ವ್ಯಾಪ್ತಿಯ ಕಸವು ನ.ಪಂ.ಮುಂಭಾಗದ ವಾಹನ ನಿಲುಗಡೆ ಕಟ್ಟಡದಲ್ಲಿ ಶೇಖರಣೆ ಆಗಿರುವುದನ್ನು ಮಾಧ್ಯಮ ಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಈ ಹಿನ್ನಲೆಯಲ್ಲಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಂಬಿ ತುಳುಕಿ ದುರ್ವಾಸನೆ ಬೀರುವ ತ್ಯಾಜ್ಯ ರಾಶಿ, ಗುಯಿಂಗುಟ್ಟಿ ಹಾರುವ ನೊ ಣಗಳ ಕಲರವನ್ನು ನೋಡಿ ಗರಂ ಆದ ಸಚಿವರು ನಗರ ಪಂಚಾಯತ್ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡರು.
ಕಚೇರಿಯ ಮುಂಭಾಗದಲ್ಲಿ ಈ ರೀತಿ ಕಸ ರಾಶಿ ಯಾಕೆ ತುಂಬಿದ್ದು ಇದರ ವಿಲೇವಾರಿಗೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ರೀತಿಯ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ ಅತೀ ಶೀಘ್ರ ಇದನ್ನು ವಿಲೇವಾರಿಗೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.
ಕಸ ವಿಲೇವಾರಿಗೆ ಸ್ಥಳ ಇಲ್ಲದಿರುವ ಬಗ್ಗೆ ಮತ್ತು ವೈಜ್ಞಾನಿಕವಾಗಿ ಕಸ ವಿಲೇವಾರಿ ಆಗದ ಬಗ್ಗೆ ಜನಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಕಸ ವಿಲೇವಾರಿಗೆ ಸೂಕ್ತ ಜಾಗ ಗುರುತಿಸಲು ಸಚಿವರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಎಸ್.ಅಂಗಾರ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಬಿ.ಸದಾಶಿವ, ಶಾಫಿ ಕುತ್ತಮೊಟ್ಟೆ ಮತ್ತಿತರರು ಉಪಸ್ಥಿತರಿದ್ದರು.
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…