ನವದೆಹಲಿ: ದೇಶದಲ್ಲಿ ಇ-ಸಿಗರೇಟ್ ಆಮದು, ಉತ್ಪಾದನೆ, ವಿತರಣೆ, ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬುಧವಾರ ನಡೆದ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ನಿಷೇಧಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ನಿಕೋಟಿನ್ ಸೇವನೆ ಮೇಲೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಎಲ್ಲಾ ಬಗೆಯ ಇ-ಸಿಗರೇಟ್ ಗಳನ್ನು ಡ್ರಗ್ಸ್ ಎಂದು ಪರಿಗಣಿಸಿ ಸಂಪೂರ್ಣ ನಿಷೇಧ ಹೇರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಧೂಮಪಾನದ ಚಟ ಬಿಡುವುದಕ್ಕೆ ಸಹಕಾರಿ ಎಂದು ಹೇಳಲಾಗುವ ಇ-ಸಿಗರೇಟ್ ಗಳನ್ನು ವಿಶ್ವಾದ್ಯಂತ ಅಪಾಯವಿಲ್ಲದ ಎಂದು ಪರಿಗಣಿಸಿ ಮಾರಾಟ ಮಾಡಲಾಗುತ್ತಿದೆ. ಆದರೆ ತಜ್ಞರ ಹೇಳಿಕೆಯ ಪ್ರಕಾರ ಇ-ಸಿಗರೇಟ್ ಗಳೂ ಆರೋಗ್ಯಕ್ಕೆ ಹಾನಿಕಾರಕವೇ ಆಗಿದೆ ಈ ಹಿನ್ನೆಲೆಯಲ್ಲಿ ಇ ಸಿಗರೇಟ್ ನಿಷೇಧಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…