ಮಂಗಳೂರು : ಕೊರೊನಾ ವೈರಸ್ ಸೋಂಕು ಪತ್ತೆಹಚ್ಚಲು ಹಾಗೂ ರೋಗ ಹರಡುವುದನ್ನು ತಡೆಗಟ್ಟಲು ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ಯಾವುದೇ ವ್ಯಕ್ತಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಗಳನ್ನು ಪೂರೈಕೆ ಮಾಡಬಾರದು ಎಂದು ಮಂಗಳೂರು ಪ್ರಾದೇಶಿಕ ಕಚೇರಿ ಉಪ ಔಷಧ ನಿಯಂತ್ರಕರು ಔಷಧ ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದಾರೆ.
Advertisement
ವೈದ್ಯರ ಸಲಹಾ ಚೀಟಿ ಇದ್ದರೆ ಆ ವ್ಯಕ್ತಿಯ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವೈದ್ಯರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಪಡೆದು ಮಾರಾಟ ರಶೀದಿಗಳಲ್ಲಿ ನಮೂದಿಸಬೇಕು ಎಂದು ಸೂಚಿಸಿದ್ದಾರೆ. ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ವ್ಯಕ್ತಿಗಳು ನೋಂದಾಯಿತ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧ ಖರೀದಿಗಾಗಿ ಬಂದಲ್ಲಿಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನು ಉಲ್ಲಂಘನೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement