ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ 2019-20ರ ಸಾಲಿನ ಹಣಕಾಸು ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಕೃಷಿಕರನ್ನೂ ಕೇಂದ್ರೀಕರಿಸಿದೆ.
ಶೂನ್ಯ ಬಂಡವಾಳ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿರುವ ಬಜೆಟ್ ರೈತ ವರ್ಗದ ಆದಾಯವನ್ನು ದ್ವಿಗುಣಗೊಳಿಸಲು ಸರಕಾರವು ಪ್ರಮುಖ ಬೆಳೆ ಹಾಗೂ ಮಧ್ಯಂತರ ಬೆಳೆಗಳಿಂದ ಗಳಿಸುವ ಆದಾಯದ ಸಮತೋಲನ ಕಾಯ್ದುಕೊಳ್ಳಲು ‘ಶೂನ್ಯ ಬಂಡವಾಳ ಕೃಷಿಗೆ’ ಹೆಚ್ಚು ಒತ್ತು ನೀಡಲಾಗುತ್ತಿದೆ. ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಒತ್ತು ನೀಡಿದೆ. ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಆದ್ಯತೆ, ಮಾರುಕಟ್ಟೆ ವ್ಯವಸ್ಥೆಗೆ 10 ಸಾವಿರ ಹೊಸ ಕೃಷಿಕರ ಸಂಘ ಸ್ಥಾಪಿಸಲು ನಿರ್ಧಾರ, ಧಾನಮಂತ್ರಿ ಕಿಸಾನ್ ಯೋಜನೆಯನ್ನು ಪ್ರಸಕ್ತ ಸಾಲಿಗೂ ಮುಂದುವರೆಸಲಾಗುತ್ತಿದ್ದು, ವಾರ್ಷಿಕ 6 ಸಾವಿರ ರುಗಳನ್ನು ಸರ್ಕಾರ ನೀಡುತ್ತಿದ್ದು, 14.5 ಕೋಟಿ ರೈತರಿಗೆ ಇದರ ಪ್ರಯೋಜನೆ ಸಿಗಲಿದೆ. ಸಾಂಪ್ರದಾಯಿಕ ಕೃಷಿಯನ್ನು ಹೆಚ್ಚು ಉತ್ಪಾದನಾಯುಕ್ತ ಮಾಡಲು ಕ್ಲಸ್ಟರ್ ಮಾದರಿ ಪದ್ಧತಿ ಮೂಲಕ ಸಾಂಪ್ರದಾಯಿಕ ಆಗ್ರೋ ಕೈಗಾರಿಕೆಗಳನ್ನು ಉತ್ತೇಜಿಸಲು ಯೋಜನೆ ರೂಪಿಸಲಾಗಿದೆ. 12.5 ಕೋಟಿ ಸಣ್ಣ ಹಾಗೂ ಮಧ್ಯಮ ರೈತರಿಗೆ (2 ಹೆಕ್ಟೇರ್) ವಾರ್ಷಿಕ ರೂ. 6000 (ಮೂರು ಕಂತಿನಲ್ಲಿ). ನೀಡಲಾಗುತ್ತದೆ . ಮೊದಲ ಕಂತಿನಲ್ಲಿ 3.11 ಕೋಟಿ ರೈತರಿಗೆ ಹಾಗೂ ಎರಡನೇ ಕಂತಿನಲ್ಲಿ 2.66 ಕೋಟಿ ರೈತರಿಗೆ ಸೌಲಭ್ಯ ಸಿಗಲಿದೆ. ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಮೂಲಕ ಮಾಸಿಕ ರೂ. 3000 ಪಿಂಚಣಿ ನೀಡಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ (PMKSS) ಅಡಿಯಲ್ಲಿ 60 ವರ್ಷ ಮೇಲ್ಪಟ್ಟ ರೈತರಿಗೆ ಪ್ರತಿ ತಿಂಗಳಿಗೆ ರೂ. 3000 ಕೇಂದ್ರ ಸರಕಾರದಿಂದ ನೀಡಲಿದೆ.
ಸೇರಿದಂತೆ ವಿವಿಧ ಕೊಡುಗೆಗಳು , ತೆರಿಗೆಗಳು, ಹೆಚ್ಚುವರಿ ಹೊರೆ ಇದೆ.
ಬಜೆಟ್ ಮುಖ್ಯಾಂಶ ಹೀಗಿದೆ…….
* ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂ. ಸೆಸ್ ಏರಿಕೆ
* ಬಂಗಾರದ ಮೇಲಿನ ಆಮದು ಸುಂಕ ಶೇ. 10ರಿಂದ 12.5ಕ್ಕೆ ಏರಿಕೆ.
* ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ. ಕ್ರೆಡಿಕ್ ಕಾರ್ಡ್ ಪೇಮೆಂಟ್‌ಗಳ ಮೇಲೆ ಶುಲ್ಕ ಇಲ್ಲ.
* ಮಧ್ಯಮ ವರ್ಗದವರ ಗೃಹ ಸಾಲಕ್ಕೆ ತೆರಿಗೆ ವಿನಾಯಿತಿ. 7 ಲಕ್ಷದವರೆಗಿನ ಗೃಹ ಸಾಲಕ್ಕೆ 15 ವರ್ಷ ತೆರಿಗೆ ವಿನಾಯಿತಿ.
* ತೆರಿಗೆ ಪಾವತಿಗೆ ಇನ್ನು ಪ್ಯಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಇದ್ದರೆ ಸಾಕು
* ಅಟಲ್ ಪೆನ್ಷನ್, ನ್ಯಾಷನಲ್ ಪೆನ್ಷನ್ ಯೋಜನೆ ಪಿಎಫ್ಆರ್‌ಡಿಐ ಜೊತೆ ಜೋಡಿಕೆ
* ಜನ್‌ಧನ್ ಖಾತೆ ಹೊಂದಿರುವ ಮಹಿಳೆಯರಿಗೆ 5 ಸಾವಿರ ರೂಪಾಯಿ ಓವರ್ ಡ್ರಾಫ್ಟ್
* ದೇಶದ ಎಲ್ಲಾ ಮಹಿಳಾ ಸಂಘಗಳಿಗೆ ಬಡ್ಡಿ ವಿನಾಯಿತಿಯಲ್ಲಿ ಸಾಲ
* 60 ವರ್ಷ ಮೇಲ್ಪ ಟ್ಟ ಕಾರ್ಮಿಕರಿಗೆ ತಿಂಗಳಿಗೆ 3 ಸಾವಿರ ರೂ. ಪೆನ್ಷನ್.
* ಸ್ಟ್ಯಾಂಡ್ ಅಪ್ ಯೋಜನೆಗಳ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಹಣದ ನೆರವು
* ಸ್ವಚ್ಛ ಭಾರತ್ ಯೋಜನೆಯಡಿ 9.6 ಕೋಟಿ ಶೌಚಾಲಯ ನಿರ್ಮಾಣ. ಗ್ರಾಮೀಣ ಪ್ರದೇಶದಲ್ಲೂ ಘನತ್ಯಾಜ್ಯ ವಿಲೇವಾರಿ ಘಟಕ
* ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 24 ಲಕ್ಷ ಕುಟುಂಬಗಳಿಗೆ ಸೂರು ಭಾಗ್ಯ. ನೂತನ ತಂತ್ರಜ್ಞಾನದಿಂದ ಆಧುನಿಕ ಮನೆ ನಿರ್ಮಾಣ
*ಜಲಶಕ್ತಿ ಸಚಿವಾಲಯ ಸ್ಥಾಪನೆ. ಜಲಸಂವರ್ಧನೆ, ಕುಡಿಯುವ ನೀರು ಯೋಜನೆಗೆ ಮೊದಲ ಆದ್ಯತೆ.
* ಶೇ .97 ರಷ್ಟು ಗ್ರಾಮಗಳಿಗೆ ಸರ್ವಋತು ಸಾರಿಗೆ ಸೌಲಭ್ಯ, ಮುಂದಿನ ಐದು ವರ್ಷದಲ್ಲಿ 25 ಸಾವಿರ ಕಿ . ಮೀ. ರಸ್ತೆ ನಿರ್ಮಾಣ,1.25 ಲಕ್ಷ ಕಿ. ಮೀ. ರಸ್ತೆ ಮೇಲ್ದರ್ಜೆಗೇರಿಸಲು ನಿರ್ಧಾರ
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…