ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿಯ ಕ್ಷೇತ್ರಗಳು:
ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್,
ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್.
ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.
ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.
ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.
ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ.
ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.
ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು: ನಿಗಧಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯನ್ನು ಫುಡ್ ಕ್ರಾಫ್ಟ್ ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ, ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…