ಮಂಗಳೂರು: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರುವ ಆಯ್ದ ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಕ್ತ ಸಾಲಿನಿಂದ ಜನಸಾಮಾನ್ಯರ ಅನುಕೂಲಕ್ಕಾಗಿ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸರಕಾರದ ಈ ಸಾಮೂಹಿಕ ಉಚಿತ ವಿವಾಹ ಕಾರ್ಯಕ್ರಮದಲ್ಲಿ ಪ್ರತಿ ನವಜೋಡಿಗೆ ಅಗತ್ಯತೆಗನುಗುಣವಾಗಿ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್, ಶಲ್ಯಕ್ಕಾಗಿ 5 ಸಾವಿರ ರೂ ಗಳನ್ನು ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ ಮತ್ತು ರವಿಕೆ ಕಣಕ್ಕಾಗಿ 10 ಸಾವಿರ ರೂಪಾಯಿಗಳನ್ನು ಮತ್ತು ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ಅಂದಾಜು 8 ಗ್ರಾಂ ತೂಕ) ಒದಗಿಸುತ್ತಿದ್ದು ಅಂದಾಜು ಒಟ್ಟು 55 ಸಾವಿರ ರೂ ಗಳನ್ನು ಸಂಬಂಧಿಸಿದ ಮುಜರಾಯಿ ದೇವಾಲಯದ ವತಿಯಿಂದ ಭರಿಸಲಾಗುವುದು.
ದ.ಕ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬಪ್ಪನಾಡು, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಒಟ್ಟು 20 ದೇವಸ್ಥಾನಗಳಲ್ಲಿ ಆಸಕ್ತರು ವಧು ವರರ ಮಾಹಿತಿಗಳೊಂದಿಗೆ ಮಾರ್ಚ್ 27ರ ಒಳಗಾಗಿ ನೊಂದಾಯಿಸಿಕೊಳ್ಳಬಹುದು, ಸಾಮೂಹಿಕ ವಿವಾಹವು ಎಪ್ರಿಲ್ 26 ರಂದು ಆದಿತ್ಯವಾರ ಅಕ್ಷಯತದಿಗೆಯಂದು ಸುಮೂಹೂರ್ತದಲ್ಲಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿಯ ಧಾರ್ಮಿಕ ದತ್ತಿ ಇಲಾಖೆಯಿಂದ ಪಡೆಯಬಹುದು ಹಾಗೂ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…