ಉಜಿರೆ: ಫೆ.11ರಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಕರ್ನಾಟಕ ಘನ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲ ಅಣ್ಣಾಸಾಹೇಬ್ ಜೊಲ್ಲೆಯವರು ಆಗಮಿಸಿ ಸಿರಿ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಇವರು ಸಿರಿ ಸಂಸ್ಥೆಯು ಒಂದು ಕುಟುಂಬವಿದ್ದಂತೆ, ಪೂಜ್ಯರ ಹಾಗೂ ಮಾತೃಶ್ರೀ ಅಮ್ಮನವರ ಮಾರ್ಗದರ್ಶನದ ಈ ಸಂಸ್ಥೆ ಮಹಿಳಾ ಸಬಲೀಕರಣದ ದೃಢ ಹೆಜ್ಜೆಯ ಸಂಕಲ್ಪದೊಂದಿಗೆ ಗ್ರಾಮೀಣ ಮಟ್ಟದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗವನ್ನು ನೀಡಿ ಸ್ವಸಹಾಯ ಸಂಘದ ಸದಸ್ಯರು ಘಟಕಗಳಲ್ಲಿ ತಯಾರಿಸಿದ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಸಿರಿ ಬ್ರಾಂಡಿನ ಮೂಲಕ ಮಾರುಕಟ್ಟೆ ಮಾಡುತ್ತಿದ್ದು, ಈ ಸಂಸ್ಥೆ ಉದ್ಯೋಗವನ್ನು ಸೃಷ್ಟಿಸುವ ಕ್ರಾಂತಿಯನ್ನೆ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಶಾಸಕರಾದ ಹರೀಶ್ ಪೂಂಜರವರು ಗ್ರಾಮೀಣ ಪ್ರದೇಶದ ಜನರಿಗೆ ಮೂಲಸೌಕರ್ಯದೊಂದಿಗೆ ಉದ್ಯೋಗವನ್ನು ನೀಡುತ್ತಿರುವ ಸಿರಿ ಸಂಸ್ಥೆ ಮಹಿಳಾ ಸಬಲೀಕರಣದ ಶಕ್ತಿ ಎಂದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್‍ರವರು ಪ್ರಾಸ್ತವಿಕವಾಗಿ ಸಂಸ್ಥೆಯು ನಡೆದು ಬಂದ ಹಾದಿ ಹಾಗೂ ಮುಂದಿನ ಯೋಜನೆಯ ಬಗ್ಗೆ ಮಾನ್ಯ ಸಚಿವರಿಗೆ ಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…