ಉಡುಪಿ : ನಾಡದೋಣಿ ದುರಂತ- ನಾಲ್ವರು ಮೀನುಗಾರರ ಮೃತ್ಯು

August 16, 2020
8:37 PM

ಉಡುಪಿ : ಭಾನುವಾರ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಬಂಡೆಗೆ ಬಡಿದು ಮಗುಚಿಬಿದ್ದು, ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಿಮಂಜೇಶ್ವರ ಸಮೀಪದ ಕೊಡೇರಿಯಿಂದ ಭಾನುವಾರ ಬೆಳಗ್ಗೆ ಸಾಗರ್ ಶ್ರೀ ಹೆಸರಿನ ದೋಣಿಯಲ್ಲಿ 11 ಮೀನುಗಾರರು ಸಮುದ್ರಕ್ಕಿಳಿದಿದ್ದರು. ಮೀನುಗಾರಿಕೆಗೆ ತೆರಳಿದ್ದ ದೋಣಿ ಅಲೆಗಳ ಅಬ್ಬರಕ್ಕೆ ಸಿಲುಕಿದೆ. ಇದರಿಂದ ನಾಗರಾಜ್ ಖಾರ್ವಿ, ಲಕ್ಷ್ಮಣ್ ಖಾರ್ವಿ, ಶೇಖರ್, ಮಂಜುನಾಥ್ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ನಾಲ್ವರ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಉಳಿದ ಮೀನುಗಾರರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

 

ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಠಾಣೆಯ ಸಿಬ್ಬಂದಿಗಳು ತೆರಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror