ಉತ್ತರ ಪ್ರದೇಶದಲ್ಲಿ ಮತ್ತೆ ಇಬ್ಬರು ಸಂತರ ಹತ್ಯೆ | ಆರೋಪಿಗಳ ಬಂಧನ

April 28, 2020
1:58 PM

ಉತ್ತರಪ್ರದೇಶ : ಉತ್ತರ ಪ್ರದೇಶದ ಬುಲಂದ್‌ಶಹರ್‌  ಜಿಲ್ಲೆಯ ಪಾಗೋನ ಗ್ರಾಮದ  ಶಿವದೇವಾಲಯದ ಒಳಗೆ ಇಬ್ಬರು ಸಾಧುಗಳು ಕೊಲೆಯಾಗಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿ ಆರೋಪಿಯನ್ನು  ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.

ಮಂಗಳವಾರ ಬೆಳಿಗ್ಗೆ ಜನರು ದೇವಸ್ಥಾನಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಮೃತರನ್ನು ಜಗಂದಾಸ್ (55) ಮತ್ತು ಸೇವಾದಾಸ್ (35) ಎಂದು ಗುರುತಿಸಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಮಾಹಿತಿ ಪಡೆದು ಜಿಲ್ಲೆಯ ಅದಿಕಾರಿಗಳಿಗೆ ತಕ್ಷಣ  ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಸೂಚಿಸಿದ್ದಾರೆ.  ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಆದೇಶಿಸಿದ್ದಾರೆ.

ಆರಂಭಿಕ ತನಿಖೆಯ ಪ್ರಕಾರ ಆರೋಪಿಯು ಕೆಲ ದಿನಗಳ ಹಿಂದೆ ದೇವಸ್ಥಾನ ಸಾಧುವಿಗೆ ಸಂಬಂಧಿಸಿದ ವಸ್ತು ಕಳ್ಳತನ ಮಾಡಿದ್ದ ಇದಕ್ಕಾಗಿ ಸಾಧು ಗದರಿಸಿದ್ದರು. ಅದಾದ ಬಳಿಕ ಇಂದು ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ ಎಂದು ಬುಲಂದ್‌ಶಹರ್ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

( ANI)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror