ಉತ್ತರಪ್ರದೇಶ : ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಪಾಗೋನ ಗ್ರಾಮದ ಶಿವದೇವಾಲಯದ ಒಳಗೆ ಇಬ್ಬರು ಸಾಧುಗಳು ಕೊಲೆಯಾಗಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.
ಮಂಗಳವಾರ ಬೆಳಿಗ್ಗೆ ಜನರು ದೇವಸ್ಥಾನಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತರನ್ನು ಜಗಂದಾಸ್ (55) ಮತ್ತು ಸೇವಾದಾಸ್ (35) ಎಂದು ಗುರುತಿಸಲಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಮಾಹಿತಿ ಪಡೆದು ಜಿಲ್ಲೆಯ ಅದಿಕಾರಿಗಳಿಗೆ ತಕ್ಷಣ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಸೂಚಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಆದೇಶಿಸಿದ್ದಾರೆ.
ಆರಂಭಿಕ ತನಿಖೆಯ ಪ್ರಕಾರ ಆರೋಪಿಯು ಕೆಲ ದಿನಗಳ ಹಿಂದೆ ದೇವಸ್ಥಾನ ಸಾಧುವಿಗೆ ಸಂಬಂಧಿಸಿದ ವಸ್ತು ಕಳ್ಳತನ ಮಾಡಿದ್ದ ಇದಕ್ಕಾಗಿ ಸಾಧು ಗದರಿಸಿದ್ದರು. ಅದಾದ ಬಳಿಕ ಇಂದು ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ ಎಂದು ಬುಲಂದ್‌ಶಹರ್ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
( ANI)
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…