ದೆಹಲಿ: 2017 ರಲ್ಲಿ ಉನ್ನಾವೊದಲ್ಲಿ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆ ಹಾಗೂ , 25 ಲಕ್ಷ ದಂಡ ವಿಧಿಸಿ ಕೋರ್ಟ್ ಆದೇಶ ನೀಡಿದೆ.ಕುಲದೀಪ್ ಸಿಂಗ್ ದೋಷಿ ಎಂದು ಡಿ 16 ರಂದು ನ್ಯಾಯಾಲಯ ತೀರ್ಪು ನೀಡಿತ್ತು, ಇಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸಿದೆ. ಸಿಬಿಐ ಆತನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ನ್ಯಾಯಾಲಯವನ್ನು ಕೋರಿತ್ತು . ಇದಕ್ಕೆ ಸಂಬಂಧಿತ ಇನ್ನು ನಾಲ್ಕು ಪ್ರಕರಣಗಳ ತೀರ್ಪು ಬರಲು ಬಾಕಿ ಇದೆ.
ಸಾರ್ವಜನಿಕ ಸೇವೆಯಲ್ಲಿದ್ದುಕೊಂಡು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಕ್ಕಾಗಿ ಕುಲದೀಪ್ ಸಿಂಗ್ ಸೆಂಗಾರ್ನನ್ನು ಐಪಿಸಿ, ಪೊಕ್ಸೊ ಕಾಯ್ದೆಯಡಿ ಅಪರಾಧಿ ಎಂದು ನ್ಯಾಯಾಲಯ ( ಡಿ 16 ರಂದು ) ತೀರ್ಪು ನೀಡಿತ್ತು. ಸೋಮವಾರ ತೀರ್ಪು ಪ್ರಕಟಿಸಿದ ದೆಹಲಿ ನ್ಯಾಯಾಲಯ, ಡಿಸೆಂಬರ್ 19 ರಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಗುವುದು ಎಂದು ತಿಳಿಸಿತ್ತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…