ಬೆಂಗಳೂರು: 15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಸೋಲಿನ ಹೊಣೆ ಹೊತ್ತ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ.