ಮಂಗಳೂರು: ಶಿಕ್ಷಣ ಇಲಾಖೆಯ ಸೇವಾ ನಿಯಮಾವಳಿಗಳಿಗೆ ಹಾಗೂ ಭಾರತದ ಸಂವಿಧಾನಕ್ಕೆ ಅಪಚಾರ ಎಸಗುವಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಸುಳ್ಯದ ಕನ್ನಡ ಉಪನ್ಯಾಸಕ ಡಾ| ಪೂವಪ್ಪ ಕಣಿಯೂರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾದ ಸೂರಜ್ ಜೈನ್ ಮಾರ್ನಾಡ್ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಡಾ|ಪೂವಪ್ಪ ಕಣಿಯೂರು ಅವರು ವಾಟ್ಸಪ್ ಮೂಲಕ ಹಲವು ಗ್ರೂಪುಗಳಿಗೆ ಸಿಎಎ ಬಗ್ಗೆ ಅಸಂವಿಧಾನಿಕವಾಗಿ ಬರೆದಿದ್ದಾರೆ, ಸಂಸತ್ತಿನ ಎರಡೂ ಸದನದಲ್ಲಿ ಅಂಗೀಕಾರವಾದ ಪೌರತ್ವ ತಿದ್ದುಪಡಿ ಕಾಯಿದೆಯ ಬಗ್ಗೆ ಅಸಂವಿಧಾನಿಕವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಸರಕಾರ ಜಾರಿಗೆ ತಂದಿರುವ ಕಾಯಿದೆಯ ವಿರುದ್ಧವಾಗಿ ಸರಕಾರಿ ನೌಕರನಾಗಿ ಭಾರತೀಯ ಸಂಸತ್ ಅಂಗೀಕರಿಸಿದ ಒಂದು ಕಾಯಿದೆಯ ವಿರುದ್ಧ ಬರೆದಿರುವ ಕಾರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.
ಈ ಸಂದರ್ಭ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿ ರವಿಚಂದ್ರ ಈ ಸಂದರ್ಭದಲ್ಲಿ ಹಾಜರಿದ್ದರು.