ಕಡಬ: ಉಪ್ಪಿನಂಗಡಿಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡರ ಪುತ್ರ ದಯೇಶ್ ಮೃತಪಟ್ಟಿದ್ದಾರೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕಡಬ ಕಡೆಗೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಉಪ್ಪಿನಂಗಡಿಯ ಸಿಟಿಲ್ಯಾಂಡ್ ಹೊಟೇಲ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…