ಉಪ ಚುನಾವಣೆಯಲ್ಲಿ ಭರ್ಜರಿ ಜಯ- ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

December 9, 2019
7:41 PM

ಸುಳ್ಯ: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ 15 ಸ್ಥಾನಗಳ ಪೈಕಿ 12ರಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ ಬಿಜೆಪಿ ಕಚೇರಿಯ ಬಳಿಯಲ್ಲಿ ನಡೆಯಿತು.

ವಿಜಯೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಸ್. ಅಂಗಾರ ರಾಜ್ಯದಲ್ಲಿ ನಿರೀಕ್ಷೆಯಂತೆ ಗೆಲುವು ಬಿಜೆಪಿಗೆ ದೊರೆತಿದೆ. ಮತದಾರರು ಪಕ್ಷದ ಮೇಲೆ ಪ್ರೀತಿಯಿಟ್ಟು ದೊಡ್ಡ ಮಟ್ಟದ ಗೆಲುವು ನೀಡಿದ್ದಾರೆ. ಜನರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಈ ಸೋಲಿನಿಂದ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅಸ್ತಿತ್ವವನ್ನು ಕಳೆದುಕೊಂಡಿದೆ ಎಂದು ಹೇಳಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮಾತನಾಡಿ ಬಿಜೆಪಿಗೆ ದೊಡ್ಡ ಮಟ್ಟದ ಗೆಲುವು ರಾಜ್ಯದ ಜನತೆ ನೀಡಿದ್ದಾರೆ. ಮುಂದಿನ ಮೂರು ವರ್ಷ ಯಡಿಯೂರಪ್ಪ ಸರಕಾರ ಅಭಿವೃದ್ದಿ ಪರವಾದ ಆಡಳಿತ ನೀಡಲಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್‍ನವರ ಹಗಲು ಕನಸಿಗೆ ರಾಜ್ಯದ ಜನ ತಣ್ಣೀರೆರಚಿದ್ದಾರೆ ಎಂದರು.

ವಿಜಯೋತ್ಸವದಲ್ಲಿ ತಾ.ಪಂ ಅದ್ಯಕ್ಷ ಚನಿಯ ಕಲ್ತಡ್ಕ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಜಿ.ಪಂ ಸದಸ್ಯ ಎಸ್.ಎನ್.ಮನ್ಮಥ, ಸುಭೋದ್ ಶೇಟ್ಟಿ ಮೇನಾಲ, ನಗರ ಪಂಚಾಯಿತಿ ಸದಸ್ಯರಾದ ಬುದ್ದನಾಯ್ಕ, ಶಶಿಕಲಾ ನೀರಬಿದಿರೆ, ಕಿಶೋರಿ ಶೇಟ್, ಪೂಜಿತಾ ಕೆ.ಯು, ವಾಣಿಶ್ರೀ ಜಟ್ಟಿಪಳ್ಳ, ಶೀಲಾ ಅರುಣ್ ಕುರುಂಜಿ, ನಾರಾಯಣ ಶಾಂತಿನಗರ, ಶಿಲ್ಪಾ ಸುದೇವ್, ವಿನಯ ಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ ಕುರುಂಜಿಭಾಗ್, ಪ್ರಮುಖರಾದ ಉದಯಕುಮಾರ್ ಆಚಾರ್, ಜಯಪ್ರಕಾಶ್ ಕುಂಚಡ್ಕ, ಎನ್.ಟಿ.ಹೊನ್ನಪ್ಪ, ಜಯರಾಮ ರೈ ಜಾಲ್ಸೂರು, ಬೂಡು ರಾಧಾಕೃಷ್ಣ ರೈ, ಹರೀಶ್ ಬುಡುಪನ್ನೇ, ಶೀನಪ್ಪ ಬಯಂಬು, ವಿನುತಾ ಪಾತಿಕಲ್ಲು, ಹೇಮಂತ್ ಕಂದಡ್ಕ, ಮಹೇಶ್ ರೈ ಮೇನಾಲ, ಅಬ್ದುಲ್ ಕುಂಞ ನೆಲ್ಯಡ್ಕ, ನಾಗರಾಜ್ ಮುಳ್ಯ ಮೊದಲಾದವರು ಉಪಸ್ಥಿತರಿದ್ದರು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror