ಸುಳ್ಯ: ಖ್ಯಾತ ಉರಗತಜ್ಞ, ಸಾಮಾಜಿಕ ಕಾರ್ಯಕರ್ತ ಸುಳ್ಯ ಕೇರ್ಪಳ ನಿವಾಸಿ ಎಂ.ಪಿ. ವಾಸುದೇವ(58) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕೆಲ ಸಮಯಗಳಿಂದ ಅಸೌಖ್ಯದಿಂದಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು. ನಿನ್ನೆ ಆರೋಗ್ಯ ಮತ್ತೆ ಹದಗೆಟ್ಟು, ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು.
ಸುಳ್ಯದಲ್ಲಿ ಹಲವು ವರ್ಷದಿಂದ ತರಂಗಿಣಿ ಕೆಟರಿಂಗ್ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದ ವಾಸುದೇವರು ಉರಗ ತಜ್ಞರಾಗಿಯೂ ಖ್ಯಾತರಾಗಿದ್ದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಮೂಲಕ ಗಮನ ಸೆಳೆದಿದ್ದರು. ಮೂರು ಬಾರಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಪಕ್ಷೇತರರಾಗಿ ಸ್ಫರ್ಧಿಸಿದ್ದರು. ಹಾವುಗಳನ್ನು ಹಿಡಿಯುವುದರಲ್ಲಿ ನಿಸ್ಸೀಮರಾಗಿದ್ದ ಅವರು ಸಾವಿರಾರು ಹಾವುಗಳನ್ನು ಹಿಡಿದು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದರು. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದ ಅವರು ಕೆಲವು ವರ್ಷಗಳ ಹಿಂದೆ ಸುಳ್ಯದಲ್ಲಿ ವಿನೂತನ ಬೀಚ್ ಕಬಡ್ಡಿಯನ್ನು ಸಂಘಟಿಸಲು ನೇತೃತ್ವ ವಹಿಸಿದ್ದರು.
ಮೃತರು ಪತ್ನಿ ವಾರಿಜಾ, ಪುತ್ರಿ ವಿಸ್ಮಿತಾ, ಪುತ್ರ ವಿನೀತ್‌ರನ್ನ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…