ಮಡಿಕೇರಿ :ಉಪವಲಯ ಅರಣ್ಯಾಧಿಕಾರಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.
ಸ್ಥಳೀಯ ತೋಟವೊಂದರಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಲು ಕುಶಾಲನಗರದ ಆನೆಕಾಡು ಉಪವಲಯದ ಅರಣ್ಯಾಧಿಕಾರಿ ಕನ್ನಂಡ ರಂಜನ್ ಅವರು ಮುಂದಾದರು. ಈ ಸಂದರ್ಭ ದಿಢೀರ್ ಆಗಿ ಚಿರತೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ಅಧಿಕಾರಿ ರಂಜನ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಬೆಳ್ಳಂಬೆಳಗ್ಗೆ ಚಿರತೆ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕವನ್ನು ಮೂಡಿಸಿದ್ದು, ಅರಣ್ಯಾಧಿಕಾರಿಗಳು ಅಗತ್ಯ ಕ್ರಮಕೈಗೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel