ಸುಬ್ರಹ್ಮಣ್ಯ : ಕೊರೊನಾ ಭೀತಿಯಿಂದ ಇಡೀ ದೇಶಕ್ಕೆ ದೇಶವೇ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಫ್ಯೂಗೆ ಕರೆ ನೀಡಿದ್ದು ದೇಶದ ಜನತೆ ಅಭೂತಪೂರ್ವವಾಗಿ ಸ್ಪಂದಿಸಿದ್ದಾರೆ. ಇದರ ಜೊತೆಗೆ ಮಾ.31 ರ ವರೆಗೆ ದಕ ಜಿಲ್ಲೆಯೂ ಸೇರಿದಂತೆ ದೇಶದ 74 ಜಿಲ್ಲೆಗಳು ಬಂದ್ ಆಗಲಿವೆ. ಮುಂಜಾಗ್ರತಾ ಕ್ರಮವಾಗಿ ದಕ ಜಿಲ್ಲೆಯಲ್ಲಿ ಮಾ.31 ರವರೆಗೆ ನಿಷೇಧಾಜ್ಞೆ ಜಾರಿಯಾಗಿದೆ.
ಹೀಗಿದ್ದರೂ ಸುಬ್ರಹ್ಮಣ್ಯದಲ್ಲಿ “ತಾಳೆಗಾರಿ ಸಂಶೋದನಾ ಶಿಬಿರ” ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಬಗ್ಗೆ ಸ್ಥಳಿಯ ಗ್ರಾಪಂ ಸದಸ್ಯ ಪ್ರಶಾಂತ್ ಭಟ್ ಅಧಿಕೃತ ಮಾಹಿತಿ ಪಡೆದು ಜಿಲ್ಲಾದಿಕಾರಿಗಳಿಗೆ ದೂರು ನೀಡಿದ್ದಾರೆ.
ಜಿಲ್ಲಾಡಳಿತ ಸಾಂಕ್ರಾಮಿಕ ರೋಗ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ಆದೇಶ ನೀಡಿದೆ. ಹೀಗಿದ್ದೂ ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತದ ವತಿಯಿಂದ ದೆಹಲಿ, ಹೈದರಾಬಾದ್ ಗಳ ಸುಮಾರು 30-40 ವ್ಯಕ್ತಿಗಳನ್ನು ಒಗ್ಗೂಡಿಸಿ ಶಿಬಿರ ನಡೆಸುತ್ತಿದೆ. ಹೀಗಾಗಿ ಗ್ರಾಮದ ಜನರ ಆರೋಗ್ಯದ ಹಿತದೃಷ್ಠಿಯಿಂದ ಪೋಲೀಸ್ ಇಲಾಖೆಗೆ, ಕಂದಾಯ ಇಲಾಖೆ, ಹಾಗೂ ಪಂಚಾಯತ್ ಆಡಳಿತದ ಗಮನಕ್ಕೆ ತರಲಾಗಿದೆ ಎಂದು ಪ್ರಶಾಂತ್ ಭಟ್ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಸುಬ್ರಹ್ಮಣ್ಯವು ರಾಜ್ಯದ ಪ್ರಸಿದ್ಧ ಧಾಮಿ೯ಕ ಕ್ಷೇತ್ರವಾಗಿದ್ದು ಶ್ರೀ ಸುಬ್ರಹ್ಮಣ್ಯ ದೇವರ ದಶ೯ನಕ್ಕೂ ಅವಕಾಶವಿಲ್ಲದಿರುವ ಬಿಗು ವಾತಾವರಣದಲ್ಲಿ ಹೊರ ರಾಜ್ಯಗಳಾದ ದೆಹಲಿ, ಹೈದರಾಬಾದ್ ನ ವ್ಯಕ್ತಿಗಳನ್ನು ಸೇರಿಸಿಕೊಂಡು ಶಿಬಿರ ನಡೆಸಿಕೊಂಡು ಕ್ಷೇತ್ರದ ನಾಗರೀಕರ ಜೀವದ ಜೊತೆ, ಕ್ಷೇತ್ರದ ಆರೋಗ್ಯದ ಬಗ್ಗೆ ಅಜಾಗರೂಕರಾಗಿ ಚೆಲ್ಲಾಟವಾಡುತ್ತಾ ಜಿಲ್ಲಾಡಳಿತ, ರಾಜ್ಯಸರಕಾರದ ಆದೇಶವನ್ನು ಗಾಳಿಗೆ ತೂರಿದವರ ಬಗ್ಗೆ ಯಾವುದೇ ಒತ್ತಡಕ್ಕೆ ಮಣಿಯದೇ ಜಿಲ್ಲಾಡಳಿತ ಸೂಕ್ತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಶಾಂತ್ ಭಟ್ ಒತ್ತಾಯ ಮಾಡಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…