ಪುತ್ತೂರು: ಖಾಸಗಿ ಲೇವಾದೇವಿದಾರರಿಂದ ಮತ್ತು ನೋಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ. ಅಲ್ಲದೆ, ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ. ಇದರ ಹೊರತಾಗಿಯೂ, ಅರ್ಜಿಗೆ ಹಣ ನೀಡಿದ್ದಲ್ಲಿ , ಅರ್ಜಿ ಬರೆಯುವುದಕ್ಕೆ ಹಣ ನೀಡಿದ್ದಲ್ಲಿ , ಜಿಲ್ಲಾ ಆಡಳಿತ ಅಥವಾ ತಾಲೂಕು ಆಡಳಿತ ಹೊಣೆ ಆಗಿರುವುದಿಲ್ಲ ಎಂದು ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರ ಪ್ರಕಟಣೆ ತಿಳಿಸಿದೆ.
ಋಣಮುಕ್ತ ಕಾಯ್ದೆಯನ್ವಯ ಖಾಸಗಿ ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಈಗ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ.
ಈ ಬಗ್ಗೆ ಸ್ಪಷ್ಟವಾಗಿ ಈ ರೀತಿ ತಿಳಿದುಕೊಳ್ಳಬೇಕು, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ ಸಂಘಗಳು / ಬ್ಯಾಂಕುಗಳು/ ಕರ್ನಾಟಕ ಸಹಕಾರಿ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೋಂದಾವಣೆ ಆದ ಅತೀ ಸಣ್ಣ ಹಣಕಾಸು ಸಂಸ್ಥೆಗಳು , ಚಿಟ್ ಫಂಡ್ ಕಾಯ್ದೆಯನ್ವಯ ನೊಂದಾವಣೆಗೊಂಡ ಚಿಟ್ ಕಂಪೆನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರ ವ್ಯಾಪ್ತಿಗೆ ಒಳಪಡುವುದಿಲ್ಲ. ಖಾಸಗಿ ಲೇವಾದೇವಿದಾರರಿಂದ ಮತ್ತು ನೊಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…