Advertisement
ಸುದ್ದಿಗಳು

ಎಂಬಿಎ ಪದವೀಧರ ಬಾಂಬ್ ಇಡುವ ಕೆಲಸ ಮಾಡಿದ್ದೇಕೆ…?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಂಕಿತ ಆರೋಪಿ ಎಂಬಿಎ ಪದವೀಧರ ಮಣಿಪಾಲ ಮೂಲದ 34 ವರ್ಷದ  ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಎಂಬಿಎ ಪದವೀಧರನಾಗಿ ಆತ ಈ ಕೆಲಸ ಮಾಡಿದ್ದೇಕೆ ?.

ಇಂಜಿನಿಯರಿಂಗ್ ಪದವಿಯ ಬಳಿಕ ಎಂಬಿಎ ಓದಿರುವ ಆದಿತ್ಯ ರಾವ್ ಕೆಲಸವಿಲ್ಲದೆ ಓಡಾಟ ನಡೆಸುತ್ತಿದ್ದ. ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಯ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ತಾಂತ್ರಿಕ ಕಾರಣಗಳಿಂದ ಆತನ ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ಮಾನಸಿಕವಾಗಿ ನೊಂದಿದ್ದ ಇದರಿಂದ 2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿದ್ದ. ಒಟ್ಟು ಮೂರು ಹುಸಿ ಬೆದರಿಕೆ ಕರೆಗಳನ್ನು ಮಾಡಿದ್ದ ಆತನನ್ನು 2018ರ ಆಗಸ್ಟ್‌ 29ರಂದು ಬಂಧಿಸಲಾಗಿತ್ತು. ನಂತರ ಆತನ ಬಿಡುಗಡೆಯಾಗಿದ್ದ. ಅದಾದ ಬಳಿಕ ಮಣಿಪಾಲದಲ್ಲಿ  ಕೆಲ ಸಮಯ ಇದ್ದು ನಂತರ ಮಂಗಳೂರಿನಲ್ಲಿ  ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿದ್ದ. ಹೋಟೆಲ್ ನಲ್ಲಿ ಸಪ್ಲೈ ಕೆಲಸಕ್ಕೆ ಬಂದವನಿಗೆ ಓದಿನ ಅರ್ಹತೆ ನೋಡಿ ಬಿಲ್ ಮಾಡುವ ಕೆಲಸ ನೀಡಿದ್ದರು. ಹೆಚ್ಚು ಮಾತನಾಡದ ಆದಿತ್ಯ ರಾವ್ ತನ್ನ ಪಾಡಿಗೆ ಇದ್ದ ಎಂದು ತಿಳಿದುಬಂದಿದೆ. ಇದೀಗ ಬಾಂಬ್ ಇರಿಸಿ ಪೊಲೀಸ್ ಅತಿಥಿಯಾಗಿದ್ದಾನೆ.

ಬಾಂಬ್ ತಯಾರು ಮಾಡಿದ್ದು ಹಾಗೂ ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳ ಪ್ರಕಾರ ಈತ ಯೂಟೂಬ್ ನೋಡಿ ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದು, ಆನ್ ಲೈನ್ ಮೂಲಕವೇ ಅದಕ್ಕೆ ಬೇಕಾದ ವಸ್ತುಗಳನ್ನು ತರಿಸಿದ್ದ ಇದಕ್ಕಾಗಿ ಹಲವು ಬಾರಿ ಪ್ರಯತ್ನ ಮಾಡಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಇರಿಸಿದ ಬಳಿಕ ಮಾರುವೇಷದಲ್ಲಿ  ಬೆಂಗಳೂರಿಗೆ ತೆರಳಿದ್ದ ಬಳಿಕ ಭಯಗೊಂಡು ಮಂಗಳವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದ.  ಮನೆಯವರೊಂದಿಗೆ ಹೆಚ್ಚು ಸಂಪರ್ಕವಿಲ್ಲದೆ ಆದಿತ್ಯ ತನ್ನ ಪಾಡಿಗೆ ಇದ್ದ. ಉದ್ಯೋಗದ ಹುಡುಕಾಟ ಎಂದು ಮನೆಯಲ್ಲಿ  ಹೇಳುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

48 minutes ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

11 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

15 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

15 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

15 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

15 hours ago