ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿಯೇ ಮುಂದುವರಿಯಲಿ – ಕೊಡಗು ಕಾಂಗ್ರೆಸ್ ಒತ್ತಾಯ

May 31, 2019
11:30 AM

ಮಡಿಕೇರಿ : ಲೋಕಸಭಾ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಕೈಗೊಂಡಿರುವ ರಾಹುಲ್ ಗಾಂಧಿ ಅವರು ಅದೇ ಹುದ್ದೆಯಲ್ಲಿ ಮುಂದುವರಿಯಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಿರ್ಣಯ ಕೈಗೊಂಡು ಎಐಸಿಸಿ ಮತ್ತು ಕೆಪಿಸಿಸಿಗೆ ಕಳುಹಿಸಿಕೊಟ್ಟಿದೆ.

Advertisement
Advertisement
Advertisement

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ರಾಹುಲ್ ಗಾಂಧಿ ಪರ ಒಲವು ವ್ಯಕ್ತಪಡಿಸಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕಾಂಗ್ರೆಸ್ ಪಕ್ಷದೊಳಗಿನ ಕೆಲವು ನ್ಯೂನತೆಗಳನ್ನು ಕಾರ್ಯಕರ್ತರೇ ಸರಿಪಡಿಸಿಕೊಂಡು ಪಕ್ಷವನ್ನು ಮತ್ತೆ ಬಲಿಷ್ಠಗೊಳಿಸಲಿದ್ದಾರೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿದ ರಾಹುಲ್ ಗಾಂಧಿ ಅವರು ತಮ್ಮ ಸ್ಥಾನವನ್ನು ತ್ಯಜಿಸುವ ಅಗತ್ಯವಿಲ್ಲದೆಂದರು. ಕಾಂಗ್ರೆಸ್ ಪಕ್ಷದ ಗೆಲುವಿಗೆ ರಾಹುಲ್ ಗಾಂಧಿ ಅವರ ಅನಿವಾರ್ಯತೆ ಇದೆ, ಕಾರ್ಯಕರ್ತರಿಗೆ ಅವರ ಮಾರ್ಗದರ್ಶನದ ಅಗತ್ಯವಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಹಾಗೂ ರಾಷ್ಟ್ರಮಟ್ಟದ ಎಲ್ಲಾ ಘಟಕಗಳು ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಬಯಸುತ್ತಿವೆ ಎಂದರು.

Advertisement

ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್ ಅವರು ಮಾತನಾಡಿ ಅಧಿಕಾರ ಹಾಗೂ ಚುನಾವಣಾ ರಾಜಕಾರಣದಲ್ಲಿ ಕಾಂಗ್ರೆಸ್‍ನ ಇತಿಹಾಸವನ್ನು ಗಮನಿಸಿದರೆ ವಿಶ್ವದಲ್ಲೇ ಇದೊಂದು ಯಶಸ್ವೀ ಪಕ್ಷವೆನಿಸಿಕೊಂಡಿದೆ. ಆದರೆ ಪಕ್ಷದೊಳಗಿನ ಕೆಲವು ಲೋಪದೋಷಗಳಿಂದಾಗಿ ಇತ್ತೀಚಿನ ದಿನಗಳಲ್ಲಿ ಗೆಲುವು ಕ್ಷೀಣಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ಸತೀಶ್ ಕುಮಾರ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕÀ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಪಾರ್ವತಿ ಫ್ಯಾನ್ಸಿ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ನಂತರ ಕಾಂಗ್ರೆಸ್ ಕಚೇರಿಯ ಎದುರು ರಾಹುಲ್ ಗಾಂಧಿ ಪರ ಘೋಷಣೆಗಳನ್ನು ಕೂಗಿದ ಮುಖಂಡರು ಹಾಗೂ ಕಾರ್ಯಕರ್ತರು ಹುದ್ದೆಯಲ್ಲಿ ಮುಂದುರಿಯುವಂತೆ ಒತ್ತಾಯಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೀರ್ಥಹಳ್ಳಿ ಮೊದಲ ಮಳೆ ವ್ಯಕ್ತಿ ಬಲಿ | ಶಿವಮೊಗ್ಗದಲ್ಲೂ ಗಾಳಿ ಮಳೆ |
April 19, 2024
10:02 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವೆ | ಗ್ರಾಮೀಣಾಭಿವೃದ್ಧಿಗೆ ಆದ್ಯತೆ ಇದೆ – ಪದ್ಮರಾಜ್‌ ಆರ್
April 12, 2024
11:07 AM
by: ದ ರೂರಲ್ ಮಿರರ್.ಕಾಂ
ವಿಕಿಮೀಡಿಯ ಸಮಿತ್‌ 2024 | ಭರತೇಶ ಅಲಸಂಡೆಮಜಲು ಆಯ್ಕೆ
April 8, 2024
11:45 PM
by: ದ ರೂರಲ್ ಮಿರರ್.ಕಾಂ
ಉರಿ ಬಿಸಿಲಿನಲ್ಲಿ ಮೈಯೆಲ್ಲಾ ತಂಪಾಗಿಸಿ ಪಶುಪತಿಯ ಗಾಳಿ-ಬೆಳಕು ಮೂಲಕ | ಮಾರಾಟ ಮೇಳ | ಇಲ್ಲಿದೆ ಮಲ್ಟಿ ಬ್ರಾಂಡೆಂಡ್‌ ಉತ್ಪನ್ನ |
April 8, 2024
10:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror