ಮಡಿಕೇರಿ : ಲೋಕಸಭಾ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಕೈಗೊಂಡಿರುವ ರಾಹುಲ್ ಗಾಂಧಿ ಅವರು ಅದೇ ಹುದ್ದೆಯಲ್ಲಿ ಮುಂದುವರಿಯಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಿರ್ಣಯ ಕೈಗೊಂಡು ಎಐಸಿಸಿ ಮತ್ತು ಕೆಪಿಸಿಸಿಗೆ ಕಳುಹಿಸಿಕೊಟ್ಟಿದೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ರಾಹುಲ್ ಗಾಂಧಿ ಪರ ಒಲವು ವ್ಯಕ್ತಪಡಿಸಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕಾಂಗ್ರೆಸ್ ಪಕ್ಷದೊಳಗಿನ ಕೆಲವು ನ್ಯೂನತೆಗಳನ್ನು ಕಾರ್ಯಕರ್ತರೇ ಸರಿಪಡಿಸಿಕೊಂಡು ಪಕ್ಷವನ್ನು ಮತ್ತೆ ಬಲಿಷ್ಠಗೊಳಿಸಲಿದ್ದಾರೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿದ ರಾಹುಲ್ ಗಾಂಧಿ ಅವರು ತಮ್ಮ ಸ್ಥಾನವನ್ನು ತ್ಯಜಿಸುವ ಅಗತ್ಯವಿಲ್ಲದೆಂದರು. ಕಾಂಗ್ರೆಸ್ ಪಕ್ಷದ ಗೆಲುವಿಗೆ ರಾಹುಲ್ ಗಾಂಧಿ ಅವರ ಅನಿವಾರ್ಯತೆ ಇದೆ, ಕಾರ್ಯಕರ್ತರಿಗೆ ಅವರ ಮಾರ್ಗದರ್ಶನದ ಅಗತ್ಯವಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಹಾಗೂ ರಾಷ್ಟ್ರಮಟ್ಟದ ಎಲ್ಲಾ ಘಟಕಗಳು ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಬಯಸುತ್ತಿವೆ ಎಂದರು.
ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್ ಅವರು ಮಾತನಾಡಿ ಅಧಿಕಾರ ಹಾಗೂ ಚುನಾವಣಾ ರಾಜಕಾರಣದಲ್ಲಿ ಕಾಂಗ್ರೆಸ್‍ನ ಇತಿಹಾಸವನ್ನು ಗಮನಿಸಿದರೆ ವಿಶ್ವದಲ್ಲೇ ಇದೊಂದು ಯಶಸ್ವೀ ಪಕ್ಷವೆನಿಸಿಕೊಂಡಿದೆ. ಆದರೆ ಪಕ್ಷದೊಳಗಿನ ಕೆಲವು ಲೋಪದೋಷಗಳಿಂದಾಗಿ ಇತ್ತೀಚಿನ ದಿನಗಳಲ್ಲಿ ಗೆಲುವು ಕ್ಷೀಣಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ಸತೀಶ್ ಕುಮಾರ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕÀ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಪಾರ್ವತಿ ಫ್ಯಾನ್ಸಿ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ನಂತರ ಕಾಂಗ್ರೆಸ್ ಕಚೇರಿಯ ಎದುರು ರಾಹುಲ್ ಗಾಂಧಿ ಪರ ಘೋಷಣೆಗಳನ್ನು ಕೂಗಿದ ಮುಖಂಡರು ಹಾಗೂ ಕಾರ್ಯಕರ್ತರು ಹುದ್ದೆಯಲ್ಲಿ ಮುಂದುರಿಯುವಂತೆ ಒತ್ತಾಯಿಸಿದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…