ಮಡಿಕೇರಿ/ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ ಹುಲಿ ಸತ್ತಿರಬೇಕೆಂದು ಈಗ ಶಂಕಿಸಲಾಗಿದೆ. ಎಚ್ ಡಿ ಕೋಟೆಯಿಂದ 15 ಕಿಮೀ ದೂರದ ಹೆಬ್ಬಾಳದಲ್ಲಿ ಹುಲಿ ಸಾವನ್ನಪ್ಪಿದೆ.
ಹುಲಿಗಳ ಕಾದಾಟದಿಂದಾಗಿ ಗಾಯಗೊಂಡು ಆಹಾರ ಸೇವಿಸಲಾಗದೆ ಸತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದು ಹೊಟ್ಟೆಯಲ್ಲಿ ಆಹಾರ ಕಂಡುಬಾರದೇ ಇರುವುದು ಶಂಕೆಯನ್ನು ಪುಷ್ಟಿಗೊಳಿಸಿದೆ. ಬಂಡೀಪುರ ಹುಲಿ ಸಂರಕ್ಷಣಾ ಕೇಂದ್ರದಿಂದ 4 ಕಿಮೀ ದೂರದಲ್ಲಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದೆ. ಕಳೆದ ವಾರವೂ ಹುಲಿ ಸಾವನ್ನಪ್ಪಿತ್ತು. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಹುಲಿಗಳು ಸಾವನ್ನಪ್ಪುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಅನುಮಾನ ವ್ಯಕ್ತಪಡಿಸುತ್ತಾರೆ.
ಅರಣ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್, ವಾರ್ಡನ್ ಕೃತಿಕಾ ಆಲನಹಳ್ಳಿ, ಆರ್ ಎಫ್ ಒ ಮಧು, ಪಶುವೈದ್ಯ ಡಾ.ಡಿ.ಎನ್.ನಾಗರಾಜು ಹಾಗೂ ಇನ್ನಿತರರು ಇದ್ದರು. ಹುಲಿಗಳ ಸಾವಿಗೆ ನಿಖರ ಕಾರಣಗಳೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…