ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ನಡೆಸಲಾಯಿತು. ಅರ್ಜಿಗಳನ್ನು ಮರುಪರಿಶೀಲಿಸಿದ ನಂತರ ಸವುಗಳನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿಕೊಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಗಳನ್ನು ಮರುವಿಲೇವಾರಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ವಹಿಸಿದರು. ವೇದಿಕೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಎಡಮಂಗಲ ವ್ಯಾಪ್ತಿಯ ಪಂಜ ಉಪ ವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಎಡಮಂಗಲ ಅರಣ್ಯ ಗಸ್ತು ರಕ್ಷಕ ಮನೋಹರ ಪಿ.ವಿ, ಕಂದಾಯ ಇಲಾಖೆಯ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಪಿಡಿಒ ಸರಿತಾ ಓಲ್ಗ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…