(ಸಾಂದರ್ಭಿಕ ಚಿತ್ರ)
ನಿಂತಿಕಲ್ಲು: ಎಣ್ಮೂರು ಗ್ರಾಮ ಪಂಚಾಯತ್ ನೌಕರ ಮೋಹನ (35) ಎಂಬವರು ಮಂಗಳವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.
ಎಣ್ಮೂರು ಗ್ರಾಮ ಪಂಚಾಯತ್ ಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿ ಪಂಚಾಯತ್ ಆಡಳಿತ ಮಂಡಳಿ ಇಬ್ಬರು ನೌಕರರನ್ನು ಅಮಾನತುಗೊಳಿಸಿತ್ತು. ಅವರಲ್ಲಿ ಮೋಹನ್ ಕೂಡಾ ಒಬ್ಬರಾಗಿದ್ದರು. ಕೆಲಸದಿಂದ ಅಮಾನತುಗೊಂಡಿದ್ದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷ ಸೇವಿಸಿದ ವಿಚಾರ ತಿಳಿದ ಮನೆಯವರು ಮತ್ತು ಸ್ಥಳೀಯರು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇಂದು ಬೆಳಗ್ಗೆ ಮೃತದೇಹವನ್ನು ಅವರ ಮನೆಗೆ ತರಲಾಗಿದೆ.
ಈ ಪ್ರಕರಣದ ಕುರಿತು ಸೂಕ್ತವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ತನಿಖೆಗೆ ದಲಿತ ಸಂಘಟನೆಗಳು ಆಗ್ರಹಿಸಿದ್ದು, ತಪ್ಪಿದಲ್ಲಿ ಮೃತದೇಹವನ್ನು ಪಂಚಾಯತ್ ಮುಂಭಾಗದಲ್ಲಿ ಇಟ್ಟು ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆ ಹೇಳಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಈರಯ್ಯ ಡಿ.ಎನ್ ಮಾಹಿತಿ ಪಡೆದುಕೊಂಡಿದ್ದು, ಮೃತ ಮೋಹನರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡಲು ಸಂಬಂಧಿಸಿದವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಿಚಾರ ಹಿಂದೆ ತೆಗೆದುಕೊಳ್ಳಲಾಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…