ಎಣ್ಮೂರು: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ ಹಾಗೂ ಚಿತ್ರಕಲೆಯು ವಿಧ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ಶ್ರೀ ವಾಸುದೇವ ನಡ್ಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಗುರು ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ನಡೆದ ಚಿತ್ರಕಲಾ ಸಂಭ್ರಮ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅಥಿತಿಗಳಾಗಿ ಕೇರ್ಪಡ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಅಕ್ಷಯ್ ಆಳ್ವಾ ಇವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಮಹಾಬಲ ಕುಳ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುತ್ತಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇದರ ಮುಖ್ಯ ಶಿಕ್ಷಕಿ ಶೀತಲ್ ಯು.ಕೆ ಎಲ್ಲರನ್ನು ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ಚಂದ್ರಶೇಖರ್ ಪೆರಾಲ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಮೋಹನ್ ಎಣ್ಮೂರು ಹಾಗೂ ಉಷಾ ಕೆ. ಎಸ್ ಇವರು ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕರಾದ ಸಂತೋಷ್ ಇವರು ಎಲ್ಲರಿಗೂ ವಂದಿಸಿದರು.
ಸ್ಪರ್ಧಾ ಪಲಿತಾಂಶ: ಪ್ರಾಥಮಿಕ ವಿಭಾಗದಲ್ಲಿ ಪ್ರಥಮ: ಪ್ರಥ್ವಿನ್ ಸಹಿಪ್ರಾ ಶಾಲೆ ಪೆರುವಾಜೆ, ದ್ವಿತೀಯ: ನೇಹಾ ಕೆ ಯಸ್ ಜಿ ನಿಂತಿಕಲ್, ತೃತೀಯ: ಮನಸ್ವಿ ರೋಟರಿ ಶಾಲೆ ಸುಳ್ಯ
ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ: ಕನ್ನಿಕಾ ಅಂಬೇಕಾಲ್ ರೋಟರಿ ಶಾಲೆ, ದ್ವಿತೀಯ: ಸಂಜನಾ ಕೆಕೆ ರೋಟರಿ ಶಾಲೆ, ತೃತೀಯ:ದುಷ್ಯಂತ ಸಿ ಸ ಪ್ರೌ ಶಾಲೆ ಪಂಜ
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…