ಸುಳ್ಯ: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ. ಚಿತ್ರ ಕಲೆಯುವಿಕೆ ವಿದ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ವಾಸುದೇವ ನಡ್ಕ ಅಭಿಪ್ರಾಯಪಟ್ಟಿದ್ದಾರೆ.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘ ಇದರ ವತಿಯಿಂದ ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಚಿತ್ರಕಲಾ ಸಂಭ್ರಮ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅಥಿತಿಗಳಾಗಿ ಕೇರ್ಪಡ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ್ ಆಳ್ವಾ ಭಾಗವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಮಹಾಬಲ ಕುಳ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುತ್ತಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಎಣ್ಮೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶೀತಲ್ ಯು.ಕೆ ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಪೆರಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸಂತೋಷ್ ವಂದಿಸಿದರು. ಮೋಹನ್ ಎಣ್ಮೂರು ಹಾಗೂ ಉಷಾ ಕೆ ಎಸ್ ಕಾರ್ಯಕ್ರಮ ಸಂಯೋಜಿಸಿದರು.
ಸ್ಪರ್ಧಾ ಪಲಿತಾಂಶ
ಪ್ರಾಥಮಿಕ ವಿಭಾಗ: ಪ್ರಥಮ: ಪ್ರಥ್ವಿ ನ್ ಸಹಿಪ್ರಾ ಶಾಲೆ ಪೆರುವಾಜೆ, ದ್ವಿತೀಯ: ನೇಹಾ ಕೆ ಯಸ್ ಜಿ ನಿಂತಿಕಲ್, ತೃತೀಯ: ಮನಸ್ವಿ ರೋಟರಿ ಶಾಲೆ ಸುಳ್ಯ
ಪ್ರೌಢಶಾಲಾ ವಿಭಾಗ: ಪ್ರಥಮ: ಕನ್ನಿಕಾ ಅಂಬೆಕಲ್ಲು, ರೋಟರಿ ಶಾಲೆ, ದ್ವಿತೀಯ: ಸಂಜನಾ ಕೆಕೆ ರೋಟರಿ ಶಾಲೆ, ತೃತೀಯ: ದುಷ್ಯಂತ ಸಿ ಸ ಪ್ರೌ ಶಾಲೆ ಪಂಜ
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…