ಸುಳ್ಯ: ನೆಹರೂ ಮೆಮೋರಿಯಲ್‍ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿ ಓಣಂ ಹಬ್ಬದ ಆಚರಣೆ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ಗಿರಿಧರಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್‍ಎಜ್ಯುಕೇಷನ್‍ನ ನಿರ್ದೇಶಕರಾದ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಹಾಗೂ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅತಿಥಿಗಳಾಗಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಮೋಹಿನಿಯಾಟ್ಟಂ, ಓಟ್ಟಂತುಳ್ಳಲ್, ವಂಜಿಪ್ಪಾಟ್, ತಿರುವಾದಿರ ಹಾಗೂ ಚೆಂಡೆ ಮೇಳ ಪ್ರದರ್ಶಿಸಲಾಯಿತು. ಪ್ರಾಂಶುಪಾಲರ ಹಾಗೂ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿಯವರ ಉಪಸ್ಥಿತಿಯಲ್ಲಿ ಉಪನ್ಯಾಸಕರ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.
ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿಷ್ಣುಪ್ರಶಾಂತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಜೈನಬ್‍ಜಿನಿರಾ ಹಾಗೂ ಸುನೋ ನಿರೂಪಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?