ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತ್ ಅಜ್ಜಾವರ ಇದರ ಸಹಯೋಗದಲ್ಲಿ ನೀರಿನ ಸಂರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರದಲ್ಲಿ ಹಮ್ಮಿಕೊಳ್ಳಲಾಯಿತು.
ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷೆ ವಸಂತಿ ಕೆ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಜ್ಜಾವರ ಗ್ರಾಮ ಪಂಚಾಯತ್‍ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲ ಎ ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಯಥೇಚ್ಛವಾಗಿ ಹರಿಯುವ ನೀರನ್ನು ಸಂರಕ್ಷಣೆ ಮಾಡಬೇಕು, ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ನೀರಿನ ಸಂರಕ್ಷಣೆ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಅಜ್ಜಾವರದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ತೇಜಾವತಿ ಕೆ ಹಾಗೂ ಸಮಾಜಕಾರ್ಯ ವಿಭಾಗ ಉಪನ್ಯಾಸಕಿ ಶೋಭಾ ಎ ಉಪಸ್ಥಿತರಿದ್ದರು.
ತೇಜಸ್ ಕೆ ಕೆ ಸ್ವಾಗತಿಸಿ, ಅನಂತ್‍ರಾಜ್ ಎ ಬಿ ವಂದಿಸಿ, ದೀಕ್ಷಿತ್ ಕೆ ಪಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಊರವರು ಉಪಸ್ಥಿತರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…