ಸುಳ್ಯ: ದ.ಕ.ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಇಲ್ಲಿನ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಎನ್ನೆಂಸಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉದ್ಘಾಟಿಸಿ ಶುಭ ಹಾರೈಸಿದರು.
ಕ್ರೀಡಾಂಗಣವನ್ನು ಉದ್ಘಾಟಸಿದ ತಹಶೀಲ್ದಾರ್ ಕುಂಞ ಅಹಮ್ಮದ್ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಎನ್ನೆಂಸಿಯ ಅಕಾಡೆಮಿಕ್ ಸಲಹೆಗಾರ, ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಚಂದ್ರ ಗೌಡ ವಹಿಸಿ ಶುಭ ಹಾರೈಸಿದರು.
ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಸ್ವಾಗತಿಸಿ, ಉಪನ್ಯಾಸಕಿ ಬೇಬಿವಿದ್ಯಾ, ಹರೀಶ್ ಚಳ್ಳ ನಿರೂಪಿಸಿದರು.
ದೈಹಿಕ ಶಿಕ್ಷಣ ಜಿಲ್ಲಾ ಸಂಯೋಜಕ ಪ್ರೇಮನಾಥ ಶೆಟ್ಟಿ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ ಎ.ಎಚ್., ನೆಹರೂ ಸ್ಮಾರಕ ಪದವಿ ಕಾಲೇಜಿನ ಪ್ರಾಂಶುಪಾಲ ಡಾ|ಗಿರಿಧರ ಗೌಡ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು, ರಾಧಾಕೃಷ್ಣ ಮಾಣಿಬೆಟ್ಟು, ಪ್ರೊ. ಜವರೇ ಗೌಡ ಉಪಸ್ಥಿತರಿದ್ದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…