ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ 2019-20ನೇ ಸಾಲಿನ ಘಟಕದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
2018-19ನೇ ಸಾಲಿನ ಘಟಕ ನಾಯಕರುಗಳಾದ ದೀಕ್ಷಿತ್ ಕೆ ಪಿ ಹಾಗೂ ನಳಿನಿ ಎಂ 2019-20ನೇ ಸಾಲಿನ ನಾಯಕರುಗಳಾದ ಭುವನ್ ಪಿ ಹಾಗೂ ಕುಮುದಾ ಬಿ ಎಸ್‍ರವರಿಗೆ, ಉಪನಾಯಕರಾದ ಶರಣ್‍ಎಸ್ ಹಾಗೂ ಚೈತ್ರಾ ಎಂ ಪಿ, ಬ್ರಿಜೇಶ್ ಕೆ ಹಾಗೂ ಮಹೇಶ್ವರಿ ಪಿ ಯವರಿಗೆ ಅಧಿಕಾರ ಹಸ್ತಾಂತರಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರಕ್ಷಕ ಠಾಣೆಯ ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ, ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಉದಯಕೃಷ್ಣ ಬಿ., ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಸಂತೋಷ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಾಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ರತ್ನಾವತಿ ಡಿ. ಹಾಗೂ ಹಿರಿಯ ರೆಡ್‍ಕ್ರಾಸ್ ಸದಸ್ಯರು ಉಪಸ್ಥಿತರಿದ್ದರು.
ತೇಜಸ್ವಿನಿ, ಮೌನ, ಸಿಂಚನಾ ಪಿ. ಎಂ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಪಲ್ಲವಿ ಸ್ವಾಗತಿಸಿ ಮೌನ ವಂದಿಸಿದರು. ಜಯಮಾಲ ಕಾರ್ಯಕ್ರಮ ನಿರೂಪಿಸಿದರು.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…