ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ ವತಿಯಿಂದ ಅರಣ್ಯ ಇಲಾಖೆ, ಸುಳ್ಯ ಇವರ ಸಹಯೋಗದೊಂದಿಗೆ ಬೀಜದುಂಡೆ ಬಿತ್ತನೆ ಕಾರ್ಯಕ್ರಮವನ್ನು ಮಂಡೆಕೋಲು ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಾಧಿಕಾರಿ ಡಾ| ಅನುರಾಧಾ ಕುರುಂಜಿಯವರ ನೇತೃತ್ವದಲ್ಲಿ ಸುಮಾರು 70 ವಿದ್ಯಾರ್ಥಿಗಳು ಅರಣ್ಯಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಯಶೋಧರ ಅವರ ಮಾರ್ಗದರ್ಶನದಲ್ಲಿ ಬೀಜದ ಉಂಡೆಗಳನ್ನು ಅರಣ್ಯ ಪ್ರದೇಶದಲ್ಲಿ ಬಿತ್ತುವ ಮೂಲಕ ಪರಿಸರ ಕಾಳಜಿಯನ್ನು ಮೆರೆದರು.
ಈ ಸಂದರ್ಭದಲ್ಲಿಅಜ್ಜಾವರದ ಅರಣ್ಯರಕ್ಷಕ ದಿವೀಶ್ ಕೆ, ಸರಕಾರಿ ಪ್ರೌಢ ಶಾಲೆಅಜ್ಜಾವರದ ಎಸ್‍ಡಿಎಂಸಿ ಅಧ್ಯಕ್ಷ ಸುಂದರ, ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕ ಮನೋಜ್‍ಕುಮಾರ್, ಅರಣ್ಯಇಲಾಖೆಯ ಶ್ರೀಧರ್ ಹಾಗೂ ಸಿಬ್ಬಂದಿಗಳು, ರೆಡ್‍ಕ್ರಾಸ್ ಘಟಕದ ನಾಯಕರುಗಳಾದ ಭುವನ್ ಪಿ, ಕುಮುದಾ ಪಿ. ಎಸ್, ಬ್ರಿಜೇಶ್ ಕೆ ಮೊದಲಾದವರು ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…