ಸುಳ್ಯ: ಶಿಕ್ಷಣ ಮತ್ತು ಜೀವನದಲ್ಲಿ ಆಧುನಿಕತೆಯನ್ನು ಬಳಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಇತರೆ ಮೌಲ್ಯಯುತವಾದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ಪ್ರೇರಣಾ 2019ನ್ನು ಆಯೋಜಿಸಿರುವಂತದು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‍ನ ಅಧ್ಯಕ್ಷ ಡಾ. ಕೆ ವಿ ಚಿದಾನಂದ ಅಭಿಪ್ರಾಯಪಟ್ಟರು.
ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗದಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ಸಮಾಜಕಾರ್ಯ ಉತ್ಸವ “ಪ್ರೇರಣಾ 2019” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮವನ್ನು ಡಾ. ಕೆ ವಿ ಚಿದಾನಂದರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಬಳಿಕ ಭಾಗವಹಿಸಿದ ಎಲ್ಲಾ ಕಾಲೇಜಿನ ನಾಯಕ-ನಾಯಕಿಯರು ಹಣತೆಯನ್ನು ಬೆಳಗಿಸಿ ಚಾಲನೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ, ಕ್ಯಾಂಪಸ್ ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಪ್ರೊ. ಜವರೇಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜಕಾರ್ಯ ವೇದಿಕೆ ಸಂಚಾಲಕಿ ಶ್ರೀಮತಿ ಶೋಭಾ ಎ ಸ್ವಾಗತಿಸಿ, ಸಮಾಜಕಾರ್ಯ ವೇದಿಕೆ ವಿದ್ಯಾರ್ಥಿ ನಾಯಕ ದೀಕ್ಷಿತ್ ಕೆ ಪಿ ವಂದಿಸಿದರು. ವಿದ್ಯಾರ್ಥಿಗಳಾದ ತೇಜಸ್ ಕೆ ಕೆ, ಅರ್ಪಣಾ, ಮೌನವಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ಕೃಪಾ ಎ ಎನ್ ಮತ್ತು ಹೇಮಂತ್ ಎನ್ ಎ ಉಪಸ್ಥಿತರಿದ್ದರು. ಸುಳ್ಯ ಮತ್ತು ಮಡಿಕೇರಿ ತಾಲೂಕಿನ 13 ಪದವಿಪೂರ್ವ ಕಾಲೇಜಿನ 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ವಹಿಸಿದ್ದರು. ಪ್ರೊ. ಬಾಲಚಂದ್ರಗೌಡ, ಚಂದ್ರ ಕೋಲ್ಚಾರ್, ಭವಾನಿ ಶಂಕರ ಅಡ್ತಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾಜಕಾರ್ಯ ವೇದಿಕೆ ಸಂಚಾಲಕಿ ಶ್ರೀಮತಿ ಶೋಭಾ ಎ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕಿ ಕೃಪಾ ಎ ಎನ್ ಸ್ವಾಗತಿಸಿ, ಮಧುರಾ ಎಂ ಆರ್ ವಂದಿಸಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಮತ್ತುರಕ್ಷಕ – ಶಿಕ್ಷಕ ಸಂಘದ ವತಿಯಿಂದ ಸಮಾಜಕಾರ್ಯ ವಿಭಾಗಕ್ಕೆ ಬೀದಿ ನಾಟಕ ಸಮವಸ್ತ್ರವನ್ನು ಹಸ್ತಾಂತರಿಸಲಾಯಿತು.
ಸ್ಪರ್ಧೆಯಲ್ಲಿ ಸಂಪಾಜೆ ಪದವಿಪೂರ್ವ ಕಾಲೇಜು ಅತ್ಯಧಿಕ ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಪ್ರೊ. ಬಾಲಚಂದ್ರಗೌಡ ಬಹುಮಾನ ವಿತರಿಸಿದರು. ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಸ್ಪರ್ಧೆಯ ತೀರ್ಪುಗಾರರಾಗಿ ನೊಡೆಲ್ ಅಧಿಕಾರಿ ಸುಬ್ರಮಣಿ, ಎನ್ನೆಂಸಿ ಉಪನ್ಯಾಸಕಿ ಪ್ರಣೀತಾ, ಚಂದನಾ, ಇನ್ನರ್‍ವ್ಹೀಲ್ ಸದಸ್ಯೆ ಶ್ರೀಮತಿ ಯೋಗಿತಾ ಗೋಪಿನಾಥ್, ಶ್ರೀಮತಿ ಶೈಲಿ ಪ್ರಭಾಕರ್, ಎನ್ನೆಂಸಿ ಉಪನ್ಯಾಸಕಿ ಶ್ರೀಮತಿ ಅಶ್ವಿನಿ, ಮನೋರೋಗ ತಜ್ಞೆ ಡಾ. ಪೂನಂ ಸಹಕರಿಸಿದರು. ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಂಘಟಕರಾಗಿ ಕಾರ್ಯ ನಿರ್ವಹಿಸಿದರು.
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…