ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘವು ನವೆಂಬರ್ 15ರಂದು ಸುಳ್ಯ ಎನ್ನೆಂಸಿಯಲ್ಲಿ ಹಳೆ ವಿದಾರ್ಥಿಗಳ ಮಹಾ ಸಂಗಮವನ್ನು ಹಮ್ಮಿಕೊಂಡಿದೆ. ಅಂದು ಎನ್ನೆಂಸಿಯ ಗೌರವ ಸಂದರ್ಶಕ ಪ್ರಾಧ್ಯಾಪಕರು ಡಾ. ಪ್ರಭಾಕರ ಶಿಶಿಲರ ಆತ್ಮಕಥನ ಬೊಗಸೆ ತುಂಬಾ ಕನಸು ಬಿಡುಗಡೆಯಾಗಲಿದೆ.
ಕಾರ್ಯಕ್ರಮದಲ್ಲಿ ಡಾ| ಮೋಹನ ಆಳ್ವ, ಡಾ| ಪುರುಷೋತ್ತಮ ಬಿಳಿಮಲೆ, ಡಾ| ಯಶೋವರ್ಮ ಮತ್ತು ಡಾ. ಕೆ.ವಿ. ಚಿದಾನಂದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಈ ಬಗ್ಗೆ ಕಾರ್ಯಕ್ರಮ ನಿಗದಿಗೆ ಅಕ್ಟೋಬರ್ 15ರಂದು ಮಂಗಳವಾರ ಅಪರಾಹ್ನ ಗಂಟೆ 3ಕ್ಕೆ ಸುಳ್ಯ ಎನ್ನೆಂಸಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಹಿರಿಯ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ಎನ್ನೆಂಸಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರ್, ಕಾರ್ಯದರ್ಶಿ ಕೆ.ಟಿ. ವಿಶ್ವನಾಥ, ಮತ್ತು ಕೋಶಾಧಿಕಾರಿ ಶಿವರಾಮ ಕೇರ್ಪಳ ತಿಳಿಸಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?