ಸುಳ್ಯ: ಕೇಂದ್ರ ಸರಕಾರ ದೇಶಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ. ವಿರುದ್ಧ ಜನಾಂದೋಲನ ಮತ್ತು ಸಾರ್ವಜನಿಕ ಪ್ರತಿಭಟನಾ ಸಭೆಯು ಜ.2ರಂದು ಅಪರಾಹ್ನ 3ಕ್ಕೆ ಸುಳ್ಯದ ಗಾಂಧೀನಗರದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆಯ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಮುಸ್ಲೀಂ ಸಮುದಾಯವನ್ನು ಗುರಿಯಾಗಿರಿಸಿ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ ಕರಾಳ ಕಾಯಿದೆಯಾಗಿದ್ದು, ಇದರ ವಿರುದ್ಧ ಸುಳ್ಯ ತಾಲೂಕು ವ್ಯಾಪ್ತಿಯ ಎಲ್ಲಾ ಮೊಹಲ್ಲಾಗಳ ಜಮಾಅತ್ ಸದಸ್ಯರನ್ನೊಳಗೊಂಡು ವಿವಿಧ ಮುಸ್ಲಿಂ ಸಂಘಟನೆಗಳ ಮತ್ತು ಸಮಾನ ಮನಸ್ಕ ಸಹಧರ್ಮಿಯರ ಹಾಗೂ ಎಲ್ಲಾ ಜಾತ್ಯಾತೀತ ಪಕ್ಷಗಳ ಸರ್ವ ರೀತಿಯ ಸಹಕಾರ ಮತ್ತು ಸಹಭಾಗಿತ್ವದೊಂದಿಗೆ ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ತಾಲೂಕಿನ ವಿವಿಧ ಭಾಗಗಳಿಂದ ಜನರು ಭಾಗವಹಿಸಿ, ದೇಶದ ಸಂವಿಧಾನದ ಉಳಿವಿಗಾಗಿ ಹಕ್ಕೊತ್ತಾಯ ಮಂಡಿಸಲಿದ್ದಾರೆ ಎಂದು ಅವರು ಹೇಳಿದರು.
ಪ್ರತಿಭಟನಾ ಸಭೆಯ ದಿನ ಸುಳ್ಯದ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ನೀಡಬೇಕೆಂದು ಅವರು ವಿನಂತಿಸಿದ್ದಾರೆ. ಪ್ರತಿಭಟನಾ ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಅಧ್ಯಕ್ಷ ಇಸಾಕ್ ಸಾಹೇಬ್ ಪಾಜಪಳ್ಳ, ಪ್ರಮುಖರಾದ ಕೆ.ಎಂ.ಮುಸ್ತಫ, ಪಿ.ಎ.ಮಹಮ್ಮದ್, ಮಹಮ್ಮದ್ ಕುಂಞ ಗೂನಡ್ಕ, ಆರ್.ಕೆ.ಮಹಮ್ಮದ್, ಕೆ.ಎಸ್.ಉಮ್ಮರ್, ರಶೀದ್ ಜಟ್ಟಿಪಳ್ಳ, ಮೂಸಾ ಕುಂಞ ಪೈಂಬೆಚ್ಚಾಲು, ಡಿ.ಎಂ.ಶಾರಿಕ್,ಅಬ್ದುಲ್ ಮಜೀದ್, ರಫೀಕ್ ಪಡು, ಅಬೂಬಕ್ಕರ್ ಅಡ್ಕಾರ್ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…