ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಕೂಡಾ ಮಳೆಯಾಗುವ ಸಾಧ್ಯತೆ ಇದೆ.
ಶುಕ್ರವಾರ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ 35 ಮಿಮೀ ಮಳೆಯಾದರೆ ಗುತ್ತಿಗಾರಿನಲ್ಲಿ 20 ಮಿಮೀ , ಕಲ್ಲಾಜೆಯಲ್ಲಿ 53 ಮಿಮೀ ಮಳೆಯಾಗಿತ್ತು. ಉಳಿದಂತೆ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿತ್ತು. ಶನಿವಾರ ಕೂಡಾ ಮೋಡ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ವಿವಿಧ ಕಡೆ ಶುಕ್ರವಾರ ಮಳೆಯಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರ್ಗಿ, ಬಾಗಲಕೋಟೆ, ಗದಗ, ಧಾರವಾಡ ಮೊದಲಾದೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಗಳಾಗಿವೆ. ಗುಡುಗು – ಸಿಡಿಲಿನ ಅಬ್ಬರಕ್ಕೆ ಹಸುಗಳು ಸಾವನ್ನಪ್ಪಿದ ಘಟನೆಯೂ ನಡೆದಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…