ಎಲಿಮಲೆಯಲ್ಲಿ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

January 19, 2020
7:57 PM

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎಲಿಮಲೆ ಸರ್ಕಾರಿ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಶಾಸಕ ಎಸ್.ಅಂಗಾರ ಬಿಡುಗಡೆ ಮಾಡಿದರು.

ಸಾಹಿತಿ ಕೃಷ್ಣಶಾಸ್ತ್ರಿ ಮರ್ಕಂಜ(ಕೃ.ಶಾ.ಮರ್ಕಂಜ) ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಾಹಿತಿ, ಪತ್ರಕರ್ತ ಗಿರೀಶ್ ರಾವ್ ಹತ್ವಾರ್ (ಜೋಗಿ), ಜಿ.ಪಂ.ಸದಸ್ಯೆ ಆಶಾ ತಿಮ್ಮಪ್ಪ ಹೊಸ ಕೃತಿಗಳನ್ನು ಬಿಡುಗಡೆ ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಯಾಗಿದ್ದರು. ದ.ಕ. ಜಿಲ್ಲಾ ಕ.ಸಾ.ಪ ಅಧ್ಯಕ್ಷ ಪ್ರದೀಪ್‍ಕುಮಾರ್ ಕಲ್ಕೂರ ಪರಿಷತ್‍ನ ಧ್ವಜಾರೋಹಣ ನೆರವೇರಿಸಿ ಸಮ್ಮೇಳನದ ಆಶಯ ಭಾಷಣ ಮಾಡಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಲಲಿತಾಜ ಮಲ್ಲಾರ ಮಾತನಾಡಿದರು. ವಸ್ತು ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನವನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.

ತಾ.ಪಂ.ಸದಸ್ಯೆ ಯಶೋದಾ ಬಾಳೆಗುಡ್ಡೆ ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಚಾಲನೆ ನೀಡಿದರು. ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಹರಪ್ರಸಾದ್ ತುದಿಯಡ್ಕ ಕನ್ನಡ ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎ.ವಿ.ತೀರ್ಥರಾಮ ಸ್ವಾಗತಿಸಿದರು, ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಸ್ಮರಣ ಸಂಚಿಕೆ ಕುರಿತು ಮಾತನಾಡಿದರು, ಗೋಪಿನಾಥ್ ಮೆತ್ತಡ್ಕ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿದರು, ರಮ್ಯಾ ದಿಲೀಪ್ ಆಶಯ ಗೀತೆ, ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಮತ್ತು ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರೈತ ಗೀತೆ ಹಾಡಿದರು. ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಉಪನ್ಯಾಸಕಿ ಬೇಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror