ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎಲಿಮಲೆ ಸರ್ಕಾರಿ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ನಡೆದ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಶಾಸಕ ಎಸ್.ಅಂಗಾರ ಬಿಡುಗಡೆ ಮಾಡಿದರು.
ಸಾಹಿತಿ ಕೃಷ್ಣಶಾಸ್ತ್ರಿ ಮರ್ಕಂಜ(ಕೃ.ಶಾ.ಮರ್ಕಂಜ) ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಾಹಿತಿ, ಪತ್ರಕರ್ತ ಗಿರೀಶ್ ರಾವ್ ಹತ್ವಾರ್ (ಜೋಗಿ), ಜಿ.ಪಂ.ಸದಸ್ಯೆ ಆಶಾ ತಿಮ್ಮಪ್ಪ ಹೊಸ ಕೃತಿಗಳನ್ನು ಬಿಡುಗಡೆ ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಯಾಗಿದ್ದರು. ದ.ಕ. ಜಿಲ್ಲಾ ಕ.ಸಾ.ಪ ಅಧ್ಯಕ್ಷ ಪ್ರದೀಪ್‍ಕುಮಾರ್ ಕಲ್ಕೂರ ಪರಿಷತ್‍ನ ಧ್ವಜಾರೋಹಣ ನೆರವೇರಿಸಿ ಸಮ್ಮೇಳನದ ಆಶಯ ಭಾಷಣ ಮಾಡಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಲಲಿತಾಜ ಮಲ್ಲಾರ ಮಾತನಾಡಿದರು. ವಸ್ತು ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನವನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.
ತಾ.ಪಂ.ಸದಸ್ಯೆ ಯಶೋದಾ ಬಾಳೆಗುಡ್ಡೆ ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಚಾಲನೆ ನೀಡಿದರು. ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಹರಪ್ರಸಾದ್ ತುದಿಯಡ್ಕ ಕನ್ನಡ ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎ.ವಿ.ತೀರ್ಥರಾಮ ಸ್ವಾಗತಿಸಿದರು, ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಸ್ಮರಣ ಸಂಚಿಕೆ ಕುರಿತು ಮಾತನಾಡಿದರು, ಗೋಪಿನಾಥ್ ಮೆತ್ತಡ್ಕ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿದರು, ರಮ್ಯಾ ದಿಲೀಪ್ ಆಶಯ ಗೀತೆ, ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಮತ್ತು ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರೈತ ಗೀತೆ ಹಾಡಿದರು. ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಉಪನ್ಯಾಸಕಿ ಬೇಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…