ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಬೆಳಗ್ಗೆ ನಡೆಯಿತು.
ಕಾರ್ಯಕ್ರಮವನ್ನು ಎಲಿಮಲೆ ಸ.ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪೇರಾಲು ಧ್ವಜಾರೋಹಣಗೈದು, ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷ ದಿವಾಕರ ನಾಯಕ್ ಎರ್ಮೆಟ್ಟಿ ಉದ್ಘಾಟಿಸಿದರು. ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ದಿವಾಕರ ಮುಂಡೋಡಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ಸಂಚಾಲಕರಾದ ಎ.ವಿ. ತೀರ್ಥರಾಮ, ನಿರ್ದೇಶಕರಾದ ರಾಧಾಕೃಷ್ಣ ಕೆ.ಆರ್. ಮಾವಿನಕಟ್ಟೆ, ಗಂಗಾಧರ ಕೇಪಳಕಜೆ, ಶಾಲಾ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು,ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷ ಭಾಸ್ಕರ ರಾವ್, ಗ್ರಾ.ಪಂ. ಉಪಾಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಆಡಳಿತ ಮಂಡಳಿ ಸದಸ್ಯರಾದ ಶ್ರೀಕೃಷ್ಣ ಭಟ್ ಗುಂಡಿಮಜಲು, ಮಹಾವೀರ ಜೈನ್, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅಖಿಲಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿತಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಶೈಕ್ಷಣಿಕ ಸಾಧನೆಗೆ ಕಾರಣರಾದ ಶಿಕ್ಷಕಿ ಹರ್ಷಿತಾರನ್ನು ಸನ್ಮಾನಿಸಿದರು. ಶಿಕ್ಷಕಿ ಪವಿತ್ರ ಅವರನ್ನು ಬೀಳ್ಕೊಡಲಾಯಿತು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ಪವಿತ್ರ ಮತ್ತು ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…