ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭವು ಶನಿವಾರ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭ ನೂತನ ಪಾಕಶಾಲಾ ಕೊಠಡಿಯನ್ನು ರಾಜ್ಯಸಭಾ ಸದಸ್ಯರಾದ ನಿವೃತ್ತ ಐಪಿಎಸ್ ಕೆ.ಸಿ.ರಾಮಮೂರ್ತಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಇರುವ ಈ ಸಂಸ್ಥೆಯು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿದೆ. ನಗರ ಪ್ರದೇಶಕ್ಕಿಂತ ಭಿನ್ನವಾದ ಶಿಕ್ಷಣದ ಜೊತೆಗೆ ಮಕ್ಕಳಿಗೆ ಎಲ್ಲಾ ರೀತಿಯ ಶಿಕ್ಷಣ ಒದಗಿಸುತ್ತಿರುವುದು ಶ್ಲಾಘನೀಯ ಎಂದರು.
ಸಭಾ ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿಯವರು ಉದ್ಘಾಟಿಸಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಅಂಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಪ್ರಚಾರಕ ಜಯರಾಮ ಬೊಳ್ಳಾಜೆ ಅತಿಥಿಗಳಾಗಿ ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ಎ.ವಿ. ತೀರ್ಥರಾಮ ಸ್ವಾಗತಿಸಿ ಪ್ರಸ್ತಾವನೆಗೈದರು. ಶಾಲಾ ಮುಖ್ಯಶಿಕ್ಷಕ ಗದಾಧರ ಬಾಳುಗೋಡು ವರದಿ ವಾಚಿಸಿದರು. ಕೃಷ್ಣಯ್ಯ ಮೂಲೆತೋಟ ವಂದಿಸಿದರು. ಶಾಲಾ ಶಿಕ್ಷಕಿಯರಾದ ಶಾಲಿನಿ ಮತ್ತು ಸುಮಾಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು, ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಭಾಸ್ಕರ್ ರಾವ್, ವಿದ್ಯಾರ್ಥಿ ನಾಯಕಿ ಅಖಿಲಾ ಎಂ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಶ್ಚಿತ್ ಕೇಪಳಕಜೆ, ಆಡಳಿತ ಮಂಡಳಿ ನಿರ್ದೇಶಕರಾದ ರಾಧಾಕೃಷ್ಣ ಕೆ.ಆರ್ ಮಾವಿನಕಟ್ಟೆ, ಗಂಗಾಧರ ಕೇಪಳಕಜೆ, ಸದಸ್ಯರಾದ ಜಯಂತ್ ಅಂಬೆಕಲ್ಲು, ಸೂರ್ಯನಾರಾಯಣ ಭಟ್ ಮೂಲೆತೋಟ, ಮೋಹನ್ ರಾಂ ಸುಳ್ಳಿ, ಶ್ರೀಕೃಷ್ಣ ಭಟ್ ಗುಂಡಿಮಜಲು, ಮಹಾವೀರ್ ಜೈನ್, ಡಿ.ಟಿ.ದಯಾನಂದ ಉಪಸ್ಥಿತರಿದ್ದರು.
ಶಾಲೆಯ ಕ್ರೀಡಾ ಶಿಕ್ಷಕಿ ದಿವ್ಯ ಬಾಳುಗೋಡು ಅವರ ಕ್ರೀಡಾ ಸಾಧನೆಗೆ ಸನ್ಮಾನಿಸಲಾಯಿತು. ಸಾಧನೆಗೈದ ವಿದ್ಯಾರ್ಥಿಗಳನ್ನು, ಹಿರಿಯ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಹೊನಲು ಬೆಳಕಿನ ಸಾಹಸ, ನೃತ್ಯ, ಕರಾಟೆ, ಯೋಗಾಸನ, ಬಯಲು ರಂಗ ಪ್ರದರ್ಶನ ನಡೆಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…