ಸುಳ್ಯ: ನಿರಂತರ ಓದಿನಿಂದ ಮಾತ್ರ ಸಾಹಿತ್ಯ ರಚನೆ ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲ, ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಹೇಳಿದರು. ಸುಳ್ಯ ತಾಲೂಕು ಸಾಹಿತ್ಯ ಪರಿಷತ್ , ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಸರಕಾರಿ ಪ್ರೌಢ ಶಾಲೆ ಎಲಿಮಲೆ ಇದರ ಆಶ್ರಯದಲ್ಲಿ ನಡೆದ ‘ಸಾಧನಾ ಶೃಂಗ’ ಸಾಹಿತಿಗಳೊಡನೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ನಂದಗೋಕುಲ, ಸಾಹಿತಿ ಕೃ.ಶಾ ಮರ್ಕಂಜ, ಶರತ್ ಮರ್ಗಿಲಡ್ಕ ಪುರುಷೋತ್ತಮ ಕಜೆ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಬಳಿಕ ವಿಧ್ಯಾರ್ಥಿಗಳು ಸಾಹಿತಿಗಳೊಂದಿಗೆ ಸಂವಾದ ನಡೆಸಿದರು. ಕನ್ನಡ ರಾಜ್ಯೋತ್ಸವ ಸಲುವಾಗಿ ನಡೆಸಿದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಪೇರಾಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುರಳೀಧರ ಸಾಹಿತಿಗಳ ಪರಿಚಯ ಮಾಡಿದರು. ಸುಂದರ ವಂದಿಸಿ, ವಿರೂಪಾಕ್ಷಪ್ಪ ಕಾರ್ಯಕ್ರಮ ನಿರೂಪಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel